Home Advertisement
Home ನಮ್ಮ ಜಿಲ್ಲೆ ಉತ್ತರ ಕನ್ನಡ ರಾಷ್ಟ್ರದ ಒಳಿತಿಗಾಗಿ ಒಗ್ಗಟ್ಟಾಗಿ ಶ್ರಮಿಸೋಣ

ರಾಷ್ಟ್ರದ ಒಳಿತಿಗಾಗಿ ಒಗ್ಗಟ್ಟಾಗಿ ಶ್ರಮಿಸೋಣ

0
4

ದಾಂಡೇಲಿ (ಉತ್ತರ ಕನ್ನಡ): ರಾಷ್ಟ್ರದ ಒಳಿತಿಗಾಗಿ ನಾವೆಲ್ಲ ಭಾರತೀಯರು ಒಗ್ಗಟ್ಟಾಗಿ ಶ್ರಮಿಸಬೇಕು. ಸಂವಿಧಾನ ನಮಗೆ ನೀಡಿದ ಹಕ್ಕುಗಳನ್ನು ಗೌರವಯುತವಾಗಿ ಪಾಲಿಸುವ ಮೂಲಕ, ಜಗತ್ತಿನ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಪ್ರಜಾಸತ್ತೆಯನ್ನು ಎತ್ತಿಹಿಡಿಯಬೇಕು ಎಂದು ಜೋಯಡಾ ತಾಲೂಕಿನ ತಹಶೀಲ್ದಾರ್ ಮಂಜುನಾಥ ಮುನ್ನೋಳಿ ಅವರು ಹೇಳಿದರು.

ಜೋಯಡಾ ಆಡಳಿತ ಸೌಧದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಧ್ವಜಾರೋಹಣ ಸಮಾರಂಭದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಈ ದಿನ ನಮಗೆ ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯದ ಹಕ್ಕುಗಳನ್ನು ನೀಡಿದ ಮಹತ್ವದ ದಿನವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:  ಮಾನವ–ಆನೆ ಸಂಘರ್ಷ ತಗ್ಗಿಸಲು ಮಹತ್ವದ ಹೆಜ್ಜೆ

ಜವಾಬ್ದಾರಿಯುತ ನಾಗರಿಕರಾಗಲು ಕರೆ: ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ ಮುನ್ನೋಳಿ, 77ನೇ ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಜೋಯಡಾ ತಾಲೂಕಿನ ಸಮಸ್ತ ಜನತೆಗೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಸ್ಥಳೀಯ ಶಾಸಕರಾದ ಆರ್.ವಿ. ದೇಶಪಾಂಡೆ ಅವರು ಶುಭಾಶಯ ಕೋರಿದ್ದಾರೆ ಎಂದು ತಿಳಿಸಿದರು.

ಸಂವಿಧಾನವನ್ನು ಗೌರವಿಸುವುದು ನಮ್ಮ ಕರ್ತವ್ಯ ಮಾತ್ರವಲ್ಲ, ದೇಶದ ಅಭಿವೃದ್ಧಿಗೆ ಕೈಜೋಡಿಸುವುದೂ ಸಹ ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ದೇಶಕ್ಕಾಗಿ ಶ್ರಮಿಸಲು ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.

ಇದನ್ನೂ ಓದಿ:  ಸಂಘರ್ಷ ರಹಿತ ರಾಜ್ಯಪಾಲರ ನಡೆ: ಗಣರಾಜ್ಯ ಭಾಷಣ ನಿರಾಳ

ಗಣ್ಯರ ಉಪಸ್ಥಿತಿ: ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಿಮಾ ಮಿರಾಶಿ, ಉಪಾಧ್ಯಕ್ಷ ಸಂತೋಷ ಮಂತೇರೊ, ಕೆಪಿಸಿಸಿ ಸದಸ್ಯ ಸದಾನಂದ ದಬಗಾರ, ಪ್ರಮುಖರಾದ ಚಂದ್ರಕಾಂತ ದೇಸಾಯಿ, ಅಜಿತ್ ಥೋರವತ್, ಭವಾನಿ ಚವ್ಹಾಣ, ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ: ಗಣರಾಜ್ಯೋತ್ಸವದ ಅಂಗವಾಗಿ ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಇದಲ್ಲದೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮೂರು ವಿದ್ಯಾರ್ಥಿಗಳನ್ನು ತಾಲೂಕಾಡಳಿತದಿಂದ ವಿಶೇಷವಾಗಿ ಗೌರವಿಸಲಾಯಿತು. ಸರ್ಕಾರದ ಶೈಕ್ಷಣಿಕ ಉತ್ತೇಜನದ ಭಾಗವಾಗಿ, ಲ್ಯಾಪ್‌ಟಾಪ್ ಬದಲಿಗೆ ₹50,000 ನಗದು ಬಹುಮಾನವನ್ನು ನೀಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

ಇದನ್ನೂ ಓದಿ:  ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ

ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ರಾಷ್ಟ್ರಭಕ್ತಿ ಜಾಗೃತಿ: ವೇದಿಕೆಯಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು ಮತ್ತು ನೃತ್ಯ ಪ್ರದರ್ಶನಗಳು ನಡೆದವು. ಈ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಕಳೆ ತಂದವು ಮತ್ತು ರಾಷ್ಟ್ರಭಕ್ತಿಯ ಭಾವನೆಗೆ ಮತ್ತಷ್ಟು ಉತ್ತೇಜನ ನೀಡಿದವು.

Previous articleವೀರರಾಣಿ ಚನ್ನಮ್ಮ ಮೂರ್ತಿ ರಕ್ಷಣೆ ಭವಿಷ್ಯ ಡೋಲಾಯಮಾನ