ವಿಜಯಪುರ(ಧೂಳಖೇಡ): ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ವಿಜಯಪುರ – ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಿವಾನಂದ ಪಾಟೀಲ ಎಂಬುವವರಿಗೆ ಸೇರಿದ ಗೊಬ್ಬರ ಅಂಗಡಿಗೆ ಸೋಮವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿ, ಅಪಾರ ಮೌಲ್ಯದ ಗೊಬ್ಬರ, ಔಷಧಿ ಮತ್ತು ಕೃಷಿ ಉತ್ಪನ್ನಗಳು ಹಾನಿಯಾಗಿರುವ ಘಟನೆ ನಡೆದಿದೆ.
ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಇಂಡಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ಸಂಪೂರ್ಣ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಝಳಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






















