Home Advertisement
Home ನಮ್ಮ ಜಿಲ್ಲೆ ಬೆಂಗಳೂರು G RAM G: ಭ್ರಷ್ಟಾಚಾರ ಮುಕ್ತ, ಕಾರ್ಮಿಕ ಸ್ನೇಹಿ ಮಹತ್ವದ ಸುಧಾರಣೆ

G RAM G: ಭ್ರಷ್ಟಾಚಾರ ಮುಕ್ತ, ಕಾರ್ಮಿಕ ಸ್ನೇಹಿ ಮಹತ್ವದ ಸುಧಾರಣೆ

0
8

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನ್ರೆಗಾ)ಯನ್ನು ‘ವಿಬಿ–ಜಿ ರಾಮ್ ಜಿ’ ಉದ್ಯೋಗ ಖಾತರಿ ಯೋಜನೆ ಎಂದು ಮರುನಾಮಕರಣ ಮಾಡಿರುವುದು ಕೇವಲ ಹೆಸರಿನ ಬದಲಾವಣೆ ಮಾತ್ರವಲ್ಲ, ಇದು ಭ್ರಷ್ಟಾಚಾರ ಮುಕ್ತ, ಜನಪರ ಹಾಗೂ ಕಾರ್ಮಿಕ ಸ್ನೇಹಿ ಮಹತ್ವದ ಸುಧಾರಣೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸರ್ಕಾರದ ವಿಬಿ–ಜಿ ರಾಮ್ ಜಿ ಉದ್ಯೋಗ ಖಾತರಿ ಯೋಜನೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮತ್ತು ಕೂಲಿ ಕಾರ್ಮಿಕರ ಆರ್ಥಿಕ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಕೈಗೊಂಡಿರುವ ಈ ದಿಟ್ಟ ಹೆಜ್ಜೆಯನ್ನು ಜೆಡಿಎಸ್ ಪಕ್ಷ ಸಂಪೂರ್ಣವಾಗಿ ಸ್ವಾಗತಿಸುತ್ತದೆ ಎಂದು ಹೇಳಿದರು. ಎನ್‌ಡಿಎ ಮಿತ್ರಪಕ್ಷವಾಗಿ ಈ ಯೋಜನೆಯನ್ನು ಸರ್ವಾನುಮತದಿಂದ ಒಪ್ಪಿಕೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ:  ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ವಿಬಿ–ಜಿ ರಾಮ್ ಜಿ ಯೋಜನೆಯ ಪ್ರಮುಖ ಉದ್ದೇಶವು ಮಧ್ಯವರ್ತಿಗಳು ಹಾಗೂ ಗುತ್ತಿಗೆದಾರರ ಹಾವಳಿಯನ್ನು ತಡೆದು, ಕೂಲಿ ಕಾರ್ಮಿಕರಿಗೆ ನೇರವಾಗಿ ಲಾಭ ತಲುಪಿಸುವುದು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಕಾರ್ಮಿಕರ ಕೂಲಿ ನೇರವಾಗಿ ಅವರ ಖಾತೆಗೆ ಜಮೆಯಾಗುವ ವ್ಯವಸ್ಥೆ ಬಲಪಡಿಸಲಾಗಿದ್ದು, ಇದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಟೀಕಿಸಿದ ನಿಖಿಲ್ ಕುಮಾರಸ್ವಾಮಿ, “ಕಾಂಗ್ರೆಸ್ ಆಡಳಿತದ ಹುಳುಕುಗಳು ಈಗ ಬಯಲಾಗುತ್ತಿವೆ. ಮಹಾತ್ಮ ಗಾಂಧೀಜಿ ಹೆಸರಿನ ಬಗ್ಗೆ ಮಾತನಾಡುವ ಕಾಂಗ್ರೆಸ್, ತಮ್ಮ ಆಡಳಿತದಲ್ಲಿ ಗಾಂಧೀಜಿಯ ತತ್ವಗಳನ್ನು ಎಷ್ಟು ಪಾಲಿಸಿದೆ ಎಂಬುದಕ್ಕೆ ಉತ್ತರ ನೀಡಬೇಕು” ಎಂದು ಪ್ರಶ್ನಿಸಿದರು.

ಇದನ್ನೂ ಓದಿ:  ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ DCM ಅಜಿತ್ ಪವಾರ್ ನಿಧನ

ಇದೇ ವೇಳೆ, ಮನ್ರೆಗಾ ಮತ್ತು ವಿಬಿ–ಜಿ ರಾಮ್ ಜಿ ಯೋಜನೆಗಳ ನಡುವಿನ ವ್ಯತ್ಯಾಸಗಳು, ಬದಲಾವಣೆಗಳ ಉದ್ದೇಶ ಹಾಗೂ ಕಾರ್ಮಿಕರಿಗೆ ದೊರೆಯುವ ನೇರ ಪ್ರಯೋಜನಗಳ ಬಗ್ಗೆ ಮಾಧ್ಯಮದ ಮೂಲಕ ರಾಜ್ಯದ ಜನತೆಗೆ ವಿವರಿಸಿದ್ದೇನೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯ ಕುರಿತು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪೋಸ್ಟರ್ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಘೋಷಿಸಿದ ಅವರು, ಮುಂಬರುವ ಕೋರ್ ಕಮಿಟಿ ಸಭೆಯಲ್ಲಿ ಯೋಜನೆಯ ಬಗ್ಗೆ ಚರ್ಚಿಸಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:  ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ರಾಜಕಾರಣಿಗಳು

ಈ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಹಿರಿಯ ನಾಯಕ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ವಿಧಾನಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ, ಶಾಸಕ ಕರೆಯಮ್ಮ ಜೆ. ನಾಯ್ಕ್, ಬೆಂಗಳೂರು ನಗರ ಅಧ್ಯಕ್ಷ ರಮೇಶ್ ಗೌಡ, ಮುಖಂಡರಾದ ಜಗದೀಶ್, ಕೃಷ್ಣ ನಾಯಕ್ ಸೇರಿದಂತೆ ಹಲವಾರು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Previous articleಕಲಬುರಗಿ: ಸಾವಿನಲ್ಲೂ ಒಂದಾದ ಸಹೋದರರು
Next articleಕರ್ನಾಟಕದ ಶಾಲೆಗಳಿಗೆ ಜಿಯೋದಿಂದ ಭವಿಷ್ಯದ ಎಐ ತರಬೇತಿ