ಬೆಳಗಾವಿ: ಮಲಪ್ರಭಾ ನದಿಗೆ ಜಿಗಿದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮದುರ್ಗ ತಾಲೂಕು ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಜಗದೀಶ ಕವಳೇಕರ (27) ಮತ್ತು ಗಂಗಮ್ಮ ತ್ಯಾಪಿ(25) ಎಂದು ಗುರುತಿಸಲಾಗಿದೆ. ಮೃತ ಜಗದೀಶನಿಗೆ ಈಗಾಗಲೇ ಮದುವೆಯಾಗಿದ್ದು, ಪತ್ನಿ ಹೆರಿಗೆಗೆ ತನ್ನ ತವರು ಮನೆಗೆ ಹೋಗಿದ್ದಳು. ಗಂಗಮ್ಮ ಜತೆ ಪ್ರೀತಿಯಲ್ಲಿದ್ದ ಜಗದೀಶ ಆಕೆಯನ್ನು ಎರಡನೇ ಮದುವೆ ಮಾಡಿಕೊಳ್ಳುವುದಾಗಿ ಮನೆಯಲ್ಲಿ ಹೇಳಿಕೊಂಡಾಗ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.
ತಮ್ಮಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಸಿಗುವುದಿಲ್ಲ ಎಂದು ತಿಳಿದ್ದರಿಂದ ಇಬ್ಬರೂ ಮನೆಬಿಟ್ಟು ಬಂದು ಈ ಕೃತ್ಯ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.






















