Home Advertisement
Home ನಮ್ಮ ಜಿಲ್ಲೆ ಕೊಪ್ಪಳ ಕೊಪ್ಪಳ KIMS ಅಧಿಕಾರಿ ಮನೆ–ಕಚೇರಿ ಸೇರಿ 5 ಕಡೆ ಲೋಕಾ ದಾಳಿ

ಕೊಪ್ಪಳ KIMS ಅಧಿಕಾರಿ ಮನೆ–ಕಚೇರಿ ಸೇರಿ 5 ಕಡೆ ಲೋಕಾ ದಾಳಿ

0
6

ಕೊಪ್ಪಳ: ಕೊಪ್ಪಳದ ಸರ್ಕಾರಿ ವೈದ್ಯಕೀಯ ಕಾಲೇಜು (KIMS) ಆಡಳಿತಾಧಿಕಾರಿ ಬಿ. ಕಲ್ಲೇಶ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ (ಜ.30) ಬೆಳಂಬೆಳಗ್ಗೆ ಬಿಗ್ ಶಾಕ್ ನೀಡಿದ್ದಾರೆ. ಕಲ್ಲೇಶ್ ಅವರಿಗೆ ಸಂಬಂಧಿಸಿದಂತೆ ಮನೆ, ಕಾಲೇಜು, ಕಚೇರಿ, ಬ್ಯಾಂಕ್ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಕೊಪ್ಪಳ ನಗರದ ಸಮೀಪದ ಭಾಗ್ಯನಗರದಲ್ಲಿರುವ ನವಚೇತನ ಕಾಲೇಜು, ಬಿ. ಕಲ್ಲೇಶ್ ಅವರ ನಿವಾಸ, ಅವರ ಸ್ವಂತ ಕಚೇರಿ, ಸಹಕಾರಿ ಬ್ಯಾಂಕ್ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಈ ಕಾರ್ಯಾಚರಣೆಯನ್ನು ರಾಯಚೂರು ಲೋಕಾಯುಕ್ತ ಡಿಎಸ್ಪಿ ಲೋಕೇಶ್ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಕೊಪ್ಪಳ, ರಾಯಚೂರು, ಗದಗ ಮತ್ತು ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಒಟ್ಟು ಐದು ಲೋಕಾಯುಕ್ತ ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ ಎಂದು ತಿಳಿದುಬಂದಿದೆ.

ದಾಳಿ ವೇಳೆ ಅಧಿಕಾರಿಗಳು ಮಹತ್ವದ ದಾಖಲೆಗಳ ಪರಿಶೀಲನೆ, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಕಡತಗಳ ಶೋಧನೆ ಹಾಗೂ ಆಸ್ತಿ–ಪಾಸ್ತಿ ವಿವರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ ಖಾತೆಗಳ ವಿವರಗಳು ಮತ್ತು ಇತರೆ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎನ್ನಲಾಗಿದೆ.

ಲೋಕಾಯುಕ್ತ ದಾಳಿಯ ಹಿನ್ನೆಲೆಯಲ್ಲಿ ಕೊಪ್ಪಳದ ಸರ್ಕಾರಿ ವೈದ್ಯಕೀಯ ಕಾಲೇಜು ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಅಧಿಕಾರಿಗಳು ದಾಳಿ ಪೂರ್ಣಗೊಳಿಸಿದ ಬಳಿಕವೇ ಪ್ರಕರಣದ ಸಂಪೂರ್ಣ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.

ಇನ್ನೂ ದಾಳಿಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಬೆಳವಣಿಗೆಗಳನ್ನು ನಿರೀಕ್ಷಿಸಲಾಗುತ್ತಿದೆ.

Previous articleಮಾಜಿ ಒಲಿಂಪಿಯನ್ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ನಿಧನ
Next articleಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ: ಹೋಂಸ್ಟೇ–ರೆಸಾರ್ಟ್‌ಗಳಲ್ಲಿ ತಪಾಸಣೆ ಹೆಚ್ಚಿಸಲು ಸೂಚನೆ