Home Advertisement
Home ನಮ್ಮ ಜಿಲ್ಲೆ ಉತ್ತರ ಕನ್ನಡ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ

0
211

ಉತ್ತರ ಕನ್ನಡ: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ ಹಾಗೂ ಮಂಕಿ ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ತಾಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನೂತನವಾಗಿ‌ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್‌ ಅನ್ನು ಮೀನುಗಾರಿಕೆ, ಬಂದರು‌ ಮತ್ತು ಒಳನಾಡು‌ ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಮುನ್ಸಿಪಾಲಿಟಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲಾಗಿದೆ. ಇದರ ಉದ್ದೇಶ ಬಡವರಿಗೆ, ಹಸಿದವರಿಗೆ ಗುಣ ಮಟ್ಟದ ಶುಚಿ ಮತ್ತು ರುಚಿಯಾದ ಪೌಷ್ಟಿಕ ಆಹಾರವನ್ನು ಕೈಗೆಟುಕುವ ದರದಲ್ಲಿ ಒದಗಿಸುವುದಾಗಿದ್ದು, ಈ‌ ಇಂದಿರಾ ಕ್ಯಾಂಟಿನ್ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.