Home Advertisement
Home ನಮ್ಮ ಜಿಲ್ಲೆ ಮೈಸೂರು ಆಗ ಲಾಂಗ್ ಈಗ ಸಿಗರೇಟ್: ಮತ್ತೆ ವಿವಾದದಲ್ಲಿ ರಜತ್

ಆಗ ಲಾಂಗ್ ಈಗ ಸಿಗರೇಟ್: ಮತ್ತೆ ವಿವಾದದಲ್ಲಿ ರಜತ್

0
115

ಮೈಸೂರು — ಸಿಗರೇಟ್ ಫೋಟೋಶೂಟ್ ವಿವಾದ: ಮತ್ತೆ ಸಂಕಷ್ಟದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್

ಸಂ.ಕ. ಸಮಾಚಾರ ಮೈಸೂರು: ಸಾರ್ವಜನಿಕವಾಗಿ ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ಬಿಗ್ ಬಾಸ್ ಸ್ಪರ್ಧಿ ರಜತ್ ಇದೀಗ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಈ ಬಾರಿ ಮೈಸೂರು ನಗರದ ಪಾರಂಪರಿಕ ಕಟ್ಟಡವಾದ ಹಳೆಯ ಜಿಲ್ಲಾಧಿಕಾರಿ ಕಚೇರಿ ಸಮೀಪ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವಿಲನ್ ಲುಕ್‌ನಲ್ಲಿ ಕಾರಿನಿಂದ ಇಳಿದು ಸಿಗರೇಟ್ ಸೇದುತ್ತಿರುವ ದೃಶ್ಯಗಳನ್ನು ಒಳಗೊಂಡ ವಿಡಿಯೋವನ್ನು ರಜತ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಅದು ಕ್ಷಣಾರ್ಧದಲ್ಲೇ ವೈರಲ್ ಆಗಿದೆ. ಆದರೆ ಈ ವಿಡಿಯೋ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದುವ ನಿಷೇಧವನ್ನು ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬರುತ್ತಿದೆ.

ಇದನ್ನೂ ಓದಿ: NH-50ರಲ್ಲಿನ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನುಬಾಹಿರವಾಗಿರುವಾಗಲೂ, ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕಾಗಿ ಈ ರೀತಿಯ ರೀಲ್ಸ್ ಮತ್ತು ಫೋಟೋಶೂಟ್ ಮಾಡಿರುವುದು ಅಸಮಂಜಸ ಎಂದು ಅನೇಕರು ಟೀಕಿಸಿದ್ದಾರೆ. ರಜತ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಹಿಂದೆ ಕೂಡ ರಜತ್ ಅವರು ಸಾರ್ವಜನಿಕ ಸ್ಥಳದಲ್ಲಿ ಮಚ್ಚು ಹಿಡಿದು ಫೋಟೋಶೂಟ್ ಮಾಡಿಸಿಕೊಂಡ ಪ್ರಕರಣದಲ್ಲಿ ಜೈಲಿಗೆ ಹೋಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆ ಪ್ರಕರಣದಿಂದ ಪಾಠ ಕಲಿಯದೆ ಮತ್ತೆ ವಿವಾದಾತ್ಮಕ ವರ್ತನೆ ತೋರಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣ: ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು, 15 ಮಂದಿ ಗಾಯ

ಸಾಮಾಜಿಕ ಜಾಲತಾಣಗಳಲ್ಲಿ “ಸೆಲೆಬ್ರಿಟಿಗಳು ಸಮಾಜಕ್ಕೆ ಮಾದರಿಯಾಗಬೇಕು”, “ಇಂತಹ ವರ್ತನೆ ಯುವಕರ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ” ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವು ಮಂದಿ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡುತ್ತಿದ್ದಾರೆ.

ಈ ವಿಷಯದ ಕುರಿತು ರಜತ್ ಅವರಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Previous articleNH-50ರಲ್ಲಿನ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ
Next articleಮೈಸೂರು: ಅಧಿಕಾರಿಗಳ ಮನೆ ಸೇರಿದಂತೆ ಏಳು ಕಡೆ ಲೋಕಾ ದಾಳಿ