Home Advertisement
Home ನಮ್ಮ ಜಿಲ್ಲೆ ಉತ್ತರ ಕನ್ನಡ ಸತೀಶ್ ಸೈಲ್‌ಗೆ ಲಿವರ್ ಕಸಿಗಾಗಿ ವೈದ್ಯಕೀಯ ಜಾಮೀನು ಮಂಜೂರು

ಸತೀಶ್ ಸೈಲ್‌ಗೆ ಲಿವರ್ ಕಸಿಗಾಗಿ ವೈದ್ಯಕೀಯ ಜಾಮೀನು ಮಂಜೂರು

0
139

ದಾಂಡೇಲಿ (ಉತ್ತರ ಕನ್ನಡ): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೆ. ಸೈಲ್ ಅವರಿಗೆ ಲಿವರ್ ಕಸಿ ಶಸ್ತ್ರಚಿಕಿತ್ಸೆಗಾಗಿ ಕರ್ನಾಟಕ ಹೈಕೋರ್ಟ್ ಗುರುವಾರ ಮತ್ತೆ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.

ಶಾಸಕ ಸತೀಶ್ ಸೈಲ್ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿದ ನ್ಯಾಯಾಲಯ, ಯಕೃತ್ತು ಕಸಿ ಶಸ್ತ್ರಚಿಕಿತ್ಸೆ ನಡೆಸಿಕೊಳ್ಳಲು ಅವಕಾಶ ನೀಡಿದ್ದು, ಅವರ ಚಿಕಿತ್ಸೆಯ ಪ್ರಗತಿಯನ್ನು ನಿರಂತರವಾಗಿ ನಿಯಮಿತ ವೈದ್ಯಕೀಯ ವರದಿ ನ್ಯಾಯಾಲಯಕ್ಕೆ ತಿಳಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಬೆಳಗಾವಿ: ಮಹಿಳಾ ಅಧಿಕಾರಿಗೆ ಹಿಡನ್ ಕ್ಯಾಮರಾ ಬ್ಲ್ಯಾಕ್‌ಮೇಲ್

ನ್ಯಾಯಾಲಯದ ಆದೇಶ: ಪ್ರತಿ ಎರಡು ವಾರಗಳಿಗೊಮ್ಮೆ ಯಕೃತ್ತು ಕಸಿ ಸಂಬಂಧಿತ ವೈದ್ಯಕೀಯ ವರದಿ ಸಲ್ಲಿಸಬೇಕು, ಪ್ರತಿ ಎಂಟು ವಾರಗಳಿಗೊಮ್ಮೆ ಆರೋಗ್ಯ ಪ್ರಗತಿ ವರದಿಯನ್ನು ನ್ಯಾಯಾಲಯದ ಮುಂದೆ ಇಡಬೇಕು, ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ವಿಚಾರಣೆಯ ಪ್ರಕ್ರಿಯೆಗೆ ಅಡ್ಡಿಪಡಿಸಬಾರದು ಎಂಬ ಷರತ್ತುಗಳನ್ನು ಪಾಲಿಸಬೇಕು. ಇದಲ್ಲದೆ, ಶಾಸಕರಿಗೆ ವೈಯಕ್ತಿಕ ಭದ್ರತೆಯೊಂದಿಗೆ 5 ಲಕ್ಷ ರೂಪಾಯಿ ಮೊತ್ತದ ಶ್ಯೂರಿಟಿ ಬಾಂಡ್ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಇಡಿ ಬಂಧನ ಮತ್ತು ತನಿಖೆಯ ಹಿನ್ನೆಲೆ: ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಕಳೆದ ವರ್ಷ ಸೆಪ್ಟೆಂಬರ್ 9 ರಂದು ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧಿಸಿದ್ದರು. ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲೇ ಅವರನ್ನು ವಶಕ್ಕೆ ಪಡೆಯಲಾಗಿತ್ತು. ನಂತರ ಮಧ್ಯಂತರ ಜಾಮೀನಿನ ಮೇಲೆ ಸತೀಶ್ ಸೈಲ್ ಅವರು ಬಿಡುಗಡೆಗೊಂಡಿದ್ದರು. ಆದರೆ ತನಿಖೆ ಪ್ರಕ್ರಿಯೆ ಮುಂದುವರಿದಿತ್ತು.

ಇದನ್ನೂ ಓದಿ: ತಾಜ್ಯ ವಿಲೇವಾರಿ ಘಟಕದಲ್ಲಿ ಶುಕ್ರವಾರ ನಸುಕಿನ ಜಾವ ಭಾರಿ ಅಗ್ನಿ ಅವಘಡ 

ಇಡಿ ದಾಳಿ ಮತ್ತು ಆಸ್ತಿ ವಶ: ಇದಕ್ಕೂ ಮುನ್ನ, ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ 2025ರ ಆಗಸ್ಟ್ 13 ಮತ್ತು 14ರಂದು ಸತೀಶ್ ಸೈಲ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿತ್ತು.

ಈ ದಾಳಿಯ ವೇಳೆ ಅಕ್ರಮ ಆಸ್ತಿ, ಹೆಚ್ಚಿನ ಮೊತ್ತದ ನಗದು ಹಣ, ಸುಮಾರು ಒಂದು ಕೆ.ಜಿ. ಚಿನ್ನದ ಆಭರಣಗಳು ಪತ್ತೆಯಾಗಿದ್ದು, ಇವುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೇ ವೇಳೆ, ಸೈಲ್ ಒಡೆತನದ ಆಸ್ತಿಗಳನ್ನು ಗುರಿಯಾಗಿಸಿಕೊಂಡು ಕಾರವಾರ, ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ಸಹ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳು ಹಾಗೂ ಹಣವನ್ನು ಎರಡು ಟ್ರಂಕ್‌ಗಳಲ್ಲಿ ಕೊಂಡೊಯ್ದಿದ್ದರು.

ಇದನ್ನೂ ಓದಿ: ಮಾಲೂರು ಕ್ಷೇತ್ರ ಮರು ಮತ ಎಣಿಕೆಯಲ್ಲಿ ನಂಜೇಗೌಡ ಗೆಲುವು ದೃಢ

ಕಬ್ಬಿಣದ ಅದಿರು ಪ್ರಕರಣದಲ್ಲಿ ಶಿಕ್ಷೆ: ಬೇಲೆಕೇರಿ ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ 2024ರ ಅಕ್ಟೋಬರ್ 26ರಂದು ವಿಶೇಷ ನ್ಯಾಯಾಲಯವು ಸತೀಶ್ ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದಲ್ಲದೆ, ಸೈಲ್‌ಗೆ ಸೇರಿದ ಕಂಪನಿಗಳು ಹಾಗೂ ಇತರೆ ಆರೋಪಿತರಿಗೆ ಸಂಯುಕ್ತವಾಗಿ 44 ಕೋಟಿ ರೂಪಾಯಿ ದಂಡವನ್ನು ವಿಧಿಸಲಾಗಿತ್ತು. ಈ ಪ್ರಕರಣವು 2010ರಲ್ಲಿ ದಾಖಲಾಗಿದ್ದು, ನಂತರ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.

ಶಿಕ್ಷೆ ಅಮಾನತು ಮತ್ತು ಉಪಚುನಾವಣೆ ತಡೆ: ಕರ್ನಾಟಕ ಹೈಕೋರ್ಟ್ ಡಿಸೆಂಬರ್ 21, 2024ರಂದು ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತುಗೊಳಿಸಿತು. ಅಲ್ಲದೆ, ಅವರ ಮೇಲ್ಮನವಿಯ ವಿಚಾರಣೆ ಪೂರ್ಣಗೊಳ್ಳುವವರೆಗೆ ಕಾರವಾರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಪ್ರಕಟಿಸದಂತೆ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿತ್ತು.

Previous articleಖಾಸಗಿ ಬಸ್‌ಗೆ ಬೆಂಕಿ: 40 ಪ್ರಯಾಣಿಕರು ಅಪಾಯದಿಂದ ಪಾರು
Next articleಹಾಡಹಗಲೇ AAP ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ