ಮುಂಬೈ: ಟೀಮ್ ಇಂಡಿಯಾದ ವೇಗಿ ಹರ್ಷಿತ್ ರಾಣಾ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ.
ಫೆಬ್ರವರಿ 4ರಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ಆರಂಭದಲ್ಲೇ ಹರ್ಷಿತ್ ಮೈದಾನದಲ್ಲಿ ಸಹಜವಾಗಿ ಕಾಣಿಸಿಕೊಂಡಿರಲಿಲ್ಲ. ನಂತರ ಗಾಯದ ಸಮಸ್ಯೆಗೆ ಸಿಲುಕಿರುವುದು ಬಯಲಾಗಿದ್ದು, ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದ್ರೆ, ಸದ್ಯ ಹರ್ಷಿತ್ ಗಾಯದ ಸಮಸ್ಯೆ ಬಗೆಹರಿಯಲು ಸೂಕ್ತ ಕಾಲಾವಕಾಶದ ಅಗತ್ಯವಿದ್ದು, ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು `ಇಂದು ನಡೆಯುವ ಅಮೆರಿಕ ಪಂದ್ಯದಿಂದಷ್ಟೇ ಅಲ್ಲದೇ, ಇಡೀ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಷ್ಟೇ ಅಲ್ಲದೇ, ಹರ್ಷಿತ್ ಜಾಗದಲ್ಲಿ ವೇಗಿ ಮೊಹಮ್ಮದ್ ಸಿರಾಜ್‌ಗೆ ಅವಕಾಶ ಕಲ್ಪಿಸಲಾಗಿದೆ ಎನ್ನಲಾಗಿದೆ. ಸುದೀರ್ಘ ಕಾಲದ ನಂತರ ಸಿರಾಜ್ ಟೀಮ್ ಇಂಡಿಯಾದ ಟಿ20 ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.























