Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಅಭಿಮಾನಿಗಳು ಏನ್ ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ: ಪಕ್ಷದ ತೀರ್ಮಾನವೇ ಅಂತಿಮ

ಅಭಿಮಾನಿಗಳು ಏನ್ ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ: ಪಕ್ಷದ ತೀರ್ಮಾನವೇ ಅಂತಿಮ

0
61

ಮಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆ, ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ಹಾಗೂ ಪಕ್ಷದ ಒಳರಾಜಕೀಯ ವಿಚಾರಗಳ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಕುರಿತು ಕರಾವಳಿ ಭಾಗದ ಕೆಲ ಕಾಂಗ್ರೆಸ್ ನಾಯಕರ ಬಹಿರಂಗ ಹೇಳಿಕೆ ವಿಚಾರವಾಗಿ ಮಾತನಾಡಿ, “ಜನರಿಗೆ, ಶಾಸಕರಿಗೆ, ನಿಮಗೆಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಆಸೆ ಇದೆ. ನನಗೂ ಆ ಆಸೆ ಇದೆ. ಆದರೆ ಪಕ್ಷ ಏನು ಹೇಳುತ್ತೋ ಅದೇ ಆಗೋದು, ಅದೇ ಆಗುತ್ತೆ,” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉಡುಪಿ: ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಜಿ. ಪರಮೇಶ್ವರ ಅವರು ಮುಖ್ಯಮಂತ್ರಿ ಆಗಬೇಕು ಎಂದು ಅವರ ಅಭಿಮಾನಿಗಳು ಘೋಷಣೆ ನಡೆಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, “ಅವರವರ ಅಭಿಮಾನಿಗಳು ಏನ್ ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ. ಅಭಿಮಾನಿಗಳ ಭಾವನೆಗಳು ಸಹಜವಾಗಿವೆ,” ಎಂದರು.

ಬಜೆಟ್ ನಂತರ ನೀವು ಮುಖ್ಯಮಂತ್ರಿ ಆಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಟೈಮ್ ವಿಲ್ ಆನ್ಸರ್. ಸಮಯವೇ ಉತ್ತರ ಕೊಡುತ್ತದೆ,” ಎಂದು ಪ್ರತಿಕ್ರಿಯಿಸಿದರು. ಇದರಿಂದ ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ಕುರಿತ ಚರ್ಚೆಗೆ ಮತ್ತಷ್ಟು ಕುತೂಹಲ ಮೂಡಿದೆ.

ಇದನ್ನೂ ಓದಿ: ಮಾರ್ಚ್‌ನಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ

ಇದೇ ವೇಳೆ ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿಯೂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು. “ಈ ವಿಚಾರವಾಗಿ ನಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ. ಮೆಟ್ರೋ ಚೇರ್‌ಮ್ಯಾನ್ ಆಗಿ ಕೇಂದ್ರ ಸರ್ಕಾರದ ಪ್ರತಿನಿಧಿಯೊಬ್ಬರು ಇದ್ದಾರೆ. ಇಂದು ಅಥವಾ ನಾಳೆ ಅವರ ಜೊತೆ ಮಾತನಾಡುತ್ತೇನೆ,” ಎಂದರು.

ಮೆಟ್ರೋ ದರ ಹೆಚ್ಚಳದಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಉದ್ದೇಶವನ್ನು ವ್ಯಕ್ತಪಡಿಸಿದ ಅವರು, “ಜನರಿಗೆ ತೊಂದರೆ ಕೊಡೋಕೆ ಬಿಡಲ್ಲ. ಈ ಬಗ್ಗೆ ಗಂಭೀರವಾಗಿ ಮಾತನಾಡುತ್ತೇನೆ,” ಎಂದು ಭರವಸೆ ನೀಡಿದರು.

ಡಿಕೆ ಶಿವಕುಮಾರ್ ಅವರ ಈ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದ್ದು, ಕಾಂಗ್ರೆಸ್ ಪಕ್ಷದ ಒಳರಾಜಕೀಯ, ನಾಯಕತ್ವದ ಭವಿಷ್ಯ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅವರ ನಿಲುವು ಸ್ಪಷ್ಟಪಡಿಸಿದೆ.

Previous articleಉಡುಪಿ: ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ
Next articleಉತ್ತರಕರ್ನಾಟಕದ ಮೊದಲ WebSeries – OTTಯಲ್ಲಿ ಹೊಸ ಮಿಂಚು