Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ದೊಡ್ಡ ಹೆಜ್ಜೆ

ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ದೊಡ್ಡ ಹೆಜ್ಜೆ

0
54

ದೇಶಾದ್ಯಂತ 46 ಎಲೆಕ್ಟ್ರಾನಿಕ್ಸ್ ಘಟಕಗಳಿದ್ದು ಕರ್ನಾಟಕದಲ್ಲಿ ಮಾತ್ರವೇ ಸುಮಾರು 10,000 ಕೋಟಿ ರೂ. ಹೂಡಿಕೆ ಆಗಿದೆ

ಬೆಂಗಳೂರು: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಬೆಂಗಳೂರಿಗೆ ಭೇಟಿ ನೀಡಿ, ದೇಶದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉದ್ಯಮದಲ್ಲಿ ನಡೆದಿರುವ ಮಹತ್ವದ ಪ್ರಗತಿಯ ಕುರಿತು ಮಾಹಿತಿ ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ದಶಕದಲ್ಲಿ ಭಾರತದ ಎಲೆಕ್ಟ್ರಾನಿಕ್ಸ್ ಉತ್ಪಾದನೆ ಆರು ಪಟ್ಟು ಹೆಚ್ಚಾಗಿದೆ, ರಫ್ತು ಪ್ರಮಾಣವು ಎಂಟು ಪಟ್ಟು ಹೆಚ್ಚಾಗಿದೆ ಎಂದು ಹೇಳಿದರು. ಇಂದಿನ ದಿನಗಳಲ್ಲಿ ಭಾರತವು ವಿಶ್ವದ ಅಗ್ರ ಮೂರು ಎಲೆಕ್ಟ್ರಾನಿಕ್ಸ್ ತಯಾರಕ ರಾಷ್ಟ್ರಗಳ ಪೈಕಿ ಒಂದಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Metro ದರ ಏರಿಕೆಗೆ ತಾತ್ಕಾಲಿಕ ಬ್ರೇಕ್: ಬೆಂಗಳೂರಿಗರಿಗೆ ರಿಲೀಫ್‌

ಇದುವರೆಗೆ ದೇಶಾದ್ಯಂತ 46 ಎಲೆಕ್ಟ್ರಾನಿಕ್ಸ್ ಘಟಕಗಳಿಗೆ ಅನುಮೋದನೆ ನೀಡಲಾಗಿದ್ದು, ಕರ್ನಾಟಕದಲ್ಲಿ ಮಾತ್ರವೇ ಸುಮಾರು 10,000 ಕೋಟಿ ರೂ. ಹೂಡಿಕೆ ಆಗಿದೆ ಎಂದು ಹೇಳಿದರು.

ಬಜೆಟ್‌ನಲ್ಲಿ ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಭಾರೀ ಅನುದಾನ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಘಟಕಗಳ ತಯಾರಿಕೆಗೆ ನೀಡುವ ಅನುದಾನವನ್ನು ₹22,000 ಕೋಟಿಯಿಂದ ₹40,000 ಕೋಟಿಗೆ ಹೆಚ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಈ ಬಜೆಟ್‌ನ್ನು ಭಾರತವನ್ನು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸಲು ರೂಪಿಸಿರುವ ಮಾರ್ಗಸೂಚಿ ಎಂದು ಅವರು ವರ್ಣಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಬಜೆಟ್ ರೂಪಿಸಿದ್ದಾರೆ ಎಂದರು.

ಇದನ್ನೂ ಓದಿ: ಅಭಿಮಾನಿಗಳು ಏನ್ ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ: ಪಕ್ಷದ ತೀರ್ಮಾನವೇ ಅಂತಿಮ

Semicon 2.0 ಮೂಲಕ ಹೊಸ ಯುಗದ ಆರಂಭ: ಸೆಮಿಕಂಡಕ್ಟರ್ ಉತ್ಪಾದನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಮುಂದಿನ ಹಂತದ ಸೆಮಿಕಂಡಕ್ಟರ್ ಮಿಷನ್ – Semicon 2.0 ಅನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅಶ್ವಿನಿ ವೈಷ್ಣವ್ ಘೋಷಿಸಿದರು. ಈ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ ಶೀಘ್ರದಲ್ಲೇ ಲಭ್ಯವಾಗಲಿದೆ. ಇದರ ಮೂಲಕ ದೇಶದಲ್ಲಿ ಸಂಪೂರ್ಣ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.

2-ನ್ಯಾನೋಮೀಟರ್ ಚಿಪ್ ಅನಾವರಣ: ಈ ಸಂದರ್ಭದಲ್ಲಿ ಕ್ವಾಲ್ಕಾಮ್ ಟೆಕ್ನಾಲಜೀಸ್ ತಯಾರಿಸಿದ ಹೈಟೆಕ್ 2-ನ್ಯಾನೋಮೀಟರ್ ಚಿಪ್ ಅನ್ನು ಸಚಿವರು ಅನಾವರಣಗೊಳಿಸಿದರು. ಚಿಪ್ ವೇಫರ್ ಅನ್ನು ಕೈಯಲ್ಲಿ ಹಿಡಿದು ಅದರ ಸಾಮರ್ಥ್ಯ ಮತ್ತು ತಂತ್ರಜ್ಞಾನವನ್ನು ವಿವರಿಸಿದರು. “ಭಾರತವು ಈಗ ಸೆಮಿಕಂಡಕ್ಟರ್ ವಿನ್ಯಾಸ ಮತ್ತು ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಸ್ಥಾನ ಪಡೆಯುತ್ತಿದೆ. ಇದು ನಮ್ಮ ವಿನ್ಯಾಸ ಪರಿಸರ ವ್ಯವಸ್ಥೆಯ ಪ್ರಬುದ್ಧತೆಗೆ ಸಾಕ್ಷಿಯಾಗಿದೆ,” ಎಂದು ಹೇಳಿದರು.

ಇದನ್ನೂ ಓದಿ: ಅಕ್ರಮ ಒತ್ತುವರಿ – ₹140 ಕೋಟಿ ಮೌಲ್ಯದ 7 ಎಕರೆ ಜಾಗ ವಶಕ್ಕೆ

Make in India ಯೋಜನೆಗೆ ಮತ್ತಷ್ಟು ಬಲ: ‘ಮೇಕ್ ಇನ್ ಇಂಡಿಯಾ’ ಯೋಜನೆಯು ದೇಶದಲ್ಲಿ ಉತ್ಪಾದನೆಗೆ ಉತ್ತಮ ವಾತಾವರಣ ಸೃಷ್ಟಿಸಿದೆ ಎಂದು ಸಚಿವರು ತಿಳಿಸಿದರು. ಈ ಮೂಲಕ ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ ಮತ್ತು ಆರ್ಥಿಕ ವೃದ್ಧಿಗೆ ಸಹಕಾರವಾಗುತ್ತಿದೆ ಎಂದರು. ಭವಿಷ್ಯದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಸೆಮಿಕಂಡಕ್ಟರ್ ಹಬ್ ಆಗುವ ಗುರಿ ಹೊಂದಿದೆ ಎಂದು ಹೇಳಿದರು.

Previous articleMetro ದರ ಏರಿಕೆಗೆ ತಾತ್ಕಾಲಿಕ ಬ್ರೇಕ್: ಬೆಂಗಳೂರಿಗರಿಗೆ ರಿಲೀಫ್‌
Next articleಸರ್ಕಾರದ ಗ್ಯಾರಂಟಿಗಳು ಜನರ ಉಳಿತಾಯಕ್ಕೆ ನೆರವಾಗಿವೆ