Home Advertisement
Home ನಮ್ಮ ಜಿಲ್ಲೆ ಬೆಂಗಳೂರು `ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರಕ್ಕೆ ಸೂಚನೆ

`ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರಕ್ಕೆ ಸೂಚನೆ

0
29

ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (ಲೈಫ್ ಸರ್ಟಿಫಿಕೇಟ್) ನೀಡು ವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ದಿನೇಶ ಗೂಳಿಗೌಡ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಗ್ಗೆ ಸಲ್ಲಿಸಿದ್ದ ಮನವಿ ಮೇರೆಗೆ ಮುಖ್ಯಮಂತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿಯರಿಗೆ ಈ ಬಗ್ಗೆ ಪರಿಶೀಲನೆ ಮಾಡಿ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ಕೊಟ್ಟಿದ್ದಾರೆ.

ಪ್ರಮಾಣಪತ್ರ ಸಲ್ಲಿಕೆ: ನಿವೃತ್ತ ಸರ್ಕಾರಿ ನೌಕರರುಗಳಿಗೆ ಪಾವತಿಸುವ ಪಿಂಚಣಿ ಮೊತ್ತವನ್ನು ಪಡೆಯಲು ಅವರು ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ತಮ್ಮ ಜೀವಿತ ಪ್ರಮಾಣ ಸಲ್ಲಿಸುವುದನ್ನು ಕಡ್ಡಾಯಗೊಳಿಸಿರುವ ಮಾದರಿಯಲ್ಲಿ, ಗೃಹಲಕ್ಷ್ಮಿ ಯೋಜನೆಯಡಿಯ ಅರ್ಹ ಫಲಾನುಭವಿಗಳು ಸಹ ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ತಮ್ಮ ಜೀವಿತ ಪ್ರಮಾಣ (ಲೈಫ್ ಸರ್ಟಿಫಿಕೇಟ್) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಹಾಗೂ ಇತರೆ ಮಾರ್ಗೋಪಾಯಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಿನೇಶ ಗೂಳಿಗೌಡ ಅವರು ಮನವಿ ಮಾಡಿದ್ದರು.

Previous articleಟ್ರಂಪ್ ಬಾಬಾ ಹೇಳಿದ್ದನ್ನು ಮೋದಿ ಬಾಬಾ ಕೇಳಬೇಕು
Next articleಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ಆತ್ಮಹತ್ಯೆ