Home Advertisement
Home ನಮ್ಮ ಜಿಲ್ಲೆ ದಾವಣಗೆರೆ ವಾಲ್ಮೀಕಿ ಜಾತ್ರಾ ಸಮಿತಿ ನೇಮಕ ಖಂಡಿಸಿ ಬಂಗಾರು ಹನಮಂತು ಆಕ್ರೋಶ

ವಾಲ್ಮೀಕಿ ಜಾತ್ರಾ ಸಮಿತಿ ನೇಮಕ ಖಂಡಿಸಿ ಬಂಗಾರು ಹನಮಂತು ಆಕ್ರೋಶ

0
64

ವಾಲ್ಮೀಕಿ ಜಾತ್ರೆ ಸಮಿತಿ ಅಧ್ಯಕ್ಷರನ್ನಾಗಿ ಬಸವರಾಜ್ ದದ್ದಲ್ ಅಯ್ಕೆಗೆ ಬಂಗಾರು ಹನುಮಂತು ಅಸಮಾಧಾನ

ದಾವಣಗೆರೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಶಾಸಕ ಬಸವರಾಜ್ ದದ್ದಲ್ ಅವರನ್ನು ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಿದಂತೆ ಎಂದು ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನಮಂತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹರಿಹರದ ವಾಲ್ಮೀಕಿ ಪೀಠದಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದಲ್ಲಿ ಹಲವಾರು ಯೋಗ್ಯ ಶಾಸಕರು ಇದ್ದರೂ, ಹಗರಣದಲ್ಲಿ ಹೆಸರು ಕೇಳಿಬಂದ ವ್ಯಕ್ತಿಯನ್ನು ಜಾತ್ರಾ ಸಮಿತಿಯ ಮುಖ್ಯಸ್ಥನನ್ನಾಗಿ ಮಾಡಿರುವುದು ರಾಜ್ಯ ಸರ್ಕಾರದ ದ್ವಿಮುಖ ನೀತಿಯನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಸಿದ್ಧರಾಮಯ್ಯ ಅತ್ಯಂತ ಪುಕ್ಕಲ, ಹೇಡಿ CM: ಪ್ರತಾಪ್ ವಾಗ್ದಾಳಿ

ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾದವರನ್ನು ಮುಖ್ಯಮಂತ್ರಿ ಸ್ವತಃ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಆದರೂ ಅಂತಹ ವ್ಯಕ್ತಿಗೆ ಮಹತ್ವದ ಸ್ಥಾನ ನೀಡಿರುವುದು ಆಶ್ಚರ್ಯ ತಂದಿದೆ. ಇದು ವಾಲ್ಮೀಕಿ ಸಮಾಜವನ್ನು ತುಳಿಯುವ ಕ್ರಮವಾಗಿದೆ ಎಂದು ಬಂಗಾರು ಹನಮಂತು ಹೇಳಿದರು.

ತಮ್ಮನ್ನು ಅಹಿಂದಾ ನಾಯಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ, ಎಸ್ಸಿಪಿ–ಟಿಎಸ್‌ಪಿ ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಹಣವನ್ನು ಆ ಸಮುದಾಯದ ಅಭಿವೃದ್ಧಿಗೆ ಬಳಸಬೇಕಾಗಿದ್ದು, ಅದನ್ನು ಬೇರೆ ಉದ್ದೇಶಗಳಿಗೆ ಬಳಸುವುದು ಅನ್ಯಾಯವಾಗಿದೆ ಎಂದು ಅವರು ಕಿಡಿಕಾರಿದರು.

ಇದನ್ನೂ ಓದಿ: METRO ದರ ಏರಿಕೆ ವಿರುದ್ಧ ಖಾಲಿ ಟ್ರಂಕ್‌ ಹಿಡಿದು ತೇಜಸ್ವಿ ಪ್ರತಿಭಟನೆ

ವಾಲ್ಮೀಕಿ ಸಮುದಾಯದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ವಿಶೇಷವಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅಗತ್ಯವಿರುವಷ್ಟು ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಂಗಾರು ಹನಮಂತು ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ಟೀಕೆಗಳು ಮತ್ತಷ್ಟು ತೀವ್ರಗೊಂಡಿವೆ.

Previous articleಸಿದ್ಧರಾಮಯ್ಯ ಅತ್ಯಂತ ಪುಕ್ಕಲ, ಹೇಡಿ CM: ಪ್ರತಾಪ್ ವಾಗ್ದಾಳಿ
Next articleIPL ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ: ಗೃಹ ಸಚಿವರ ಸಮಾಲೋಚನೆ