Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ ಬೇಡಿಕೆ, ಪರಿಶೀಲಿಸಿ ತೀರ್ಮಾನ

ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ ಬೇಡಿಕೆ, ಪರಿಶೀಲಿಸಿ ತೀರ್ಮಾನ

0
193

ಹರಿಹರ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೆಟ್ರೋ ದರ ಹೆಚ್ಚಳದಲ್ಲಿ ಸರ್ಕಾರದ ಪಾತ್ರವಿಲ್ಲ: ಮೆಟ್ರೋ ದರ ಹೆಚ್ಚಳವಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮೆಟ್ರೋ ದರವನ್ನು ಕೇಂದ್ರ ಸರ್ಕಾರದಿಂದ ನೇಮಕವಾಗಿರುವ ಮೆಟ್ರೋ ಅಧ್ಯಕ್ಷರು ನಿಗದಿ ಮಾಡುತ್ತಾರೆ. ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದರು. ಮೆಟ್ರೋ ದರದ ಬಗ್ಗೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು.

ಪ್ರಧಾನಿ ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ: ಭಾರತ ಮತ್ತು ಅಮೆರಿಕ ನಡುವೆ ಆಗಿರುವ ಒಪ್ಪಂದದಿಂದ ರೈತರಿಗೆ ಅನ್ಯಾಯವಾಗುತ್ತದೆ. ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ ಎಂದರು.

ಇನ್ನೆರಡು ಸಚಿವ ಸ್ಥಾನ: ವಾಲ್ಮೀಕಿ ಜನಾಂಗದವರಿಗೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಾವು ಸಚಿವರನ್ನು ತೆಗೆದುಹಾಕಿಲ್ಲ. ಕಾರಣಾಂತರದಿಂದ ರಾಜೀನಾಮೆ ಕೊಡುವ ಪರಿಸ್ಥಿತಿ ಬಂತು. ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಪರಿಗಣಿಸಲಾಗುವುದು ಎಂದರು.

ಎಸ್‌ಎಸ್ಎಂ ರಾಜೀನಾಮೆ ಸತ್ಯಕ್ಕೆ ದೂರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.

ಬಜೆಟ್ ಮಂಡನೆ ದಿನಾಂಕ ಶೀಘ್ರ ಘೋಷಣೆ: ರಾಜ್ಯ ಬಜೆಟ್‌ಗೆ ಸಂಬಂಧಿಸಿದಂತೆ ತಯಾರಿ ನಡೆಯುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಅಧಿಕಾರ ಹಂಚಿಕೆ ಕುರಿತ ಪ್ರಶ್ನೆಗೆ ಸಿಎಂ ಸಿಡಿಮಿಡಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತು ಪ್ರಶ್ನಿಸಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಮೇಲೆ ಸಿಡಿಮಿಡಿಗೊಂಡಿದ್ದು, ಬೇರೆ ವಿಚಾರ ಇದ್ದರೆ ಮಾತ್ರ ಕೇಳಿ ಎಂದು ವಿಷಯಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಮಾಧ್ಯದವರು ಪವರ್ ಶೇರಿಂಗ್ ಬಗ್ಗೆ ಸ್ಪಷ್ಟಪಡಿಸಲು ಹೈಕಮಾಂಡ್‌ಗೆ ಶಿವಗಂಗಾ ಬಸವರಾಜ ಮತ್ತು ಇಕ್ಬಾಲ್ ಆಗ್ರಹಿಸಿರುವ ಕುರಿತು ಮತ್ತು ಡಿಸಿಎಂ ದೆಹಲಿಗೆ ಹೋಗುತ್ತಿದ್ದಾರೆ ಎಂಬ ಪ್ರಶ್ನೆಗೆ, ಪದೇ ಪದೇ ಅದೇ ವಿಷಯಕ್ಕೆ ಬರಬೇಡಿ, ನೀವು ಸಂಬಂಧಿಸಿದವರನ್ನೇ ಕೇಳಿ ಎಂದು ಖಾರವಾಗಿ ನುಡಿದರು.