ಸಿಯಾಟಲ್: 2023ರಲ್ಲಿ ಅಮೆರಿಕದ ಸಿಯಾಟಲ್‌ನಲ್ಲಿ ಪೊಲೀಸ್ ವಾಹನವೊಂದು ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲ (23) ಅವರ ಕುಟುಂಬಕ್ಕೆ 262 ಕೋಟಿ ಪರಿಹಾರ ನೀಡುವಂತೆ ಅಲ್ಲಿನ ನ್ಯಾಯಾಲಯ ಆದೇಶಿಸಿದೆ.
ಆಂಧ್ರಪ್ರದೇಶ ಮೂಲದವರಗಿದ್ದ ಯುವತಿ ಜಾಹ್ನವಿ, ಕ್ರಾಸ್‌ವಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಪೊಲೀಸ್ ವಾಹನ ಡಿಕ್ಕಿ ಹೊಡೆದಿತ್ತು. ಈ ವೇಳೆ 137 ಅಡಿ ಎತ್ತರಕ್ಕೆ ಹಾರಿ ಬಿದ್ದಿದ್ದರು.
ಅಪಘಾತದಿಂದ ರಸ್ತೆಯಲ್ಲಿ ಬಿದ್ದು ನರಳುತ್ತಿದ್ದ ಜಾಹ್ನವಿ ಕಂದುಲಾ ಬಳಿ ನಿಂತಿದ್ದ ಪೊಲೀಸ್ ಅಧಿಕಾರಿಗಳು ಜಾಹ್ನವಿ ಅವರಿಗೆ ಅಪಹಾಸ್ಯ ಮಾಡಿದ್ದರು. ಈ ವೇಳೆ ಅಧಿಕಾರಿಗಳ ಅಮಾನವೀಯವಾಗಿ ಮಾತನಾಡಿದ್ದ ವಿಡಿಯೋ ಕೂಡ ವೈರಲ್ ಆಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.
ಗಂಟೆಗೆ 25 ಮೈಲಿ ವೇಗದ ಮಿತಿ ಇದ್ದ ಪ್ರದೇಶದಲ್ಲಿ 74 ಮೈಲಿ ವೇಗದಲ್ಲಿ ವಾಹನ ಚಲಾಯಿಸಿದ್ದರು ಎನ್ನುವುದು ತನಿಖೆಯಲ್ಲಿ ದೃಢಪಟ್ಟಿದೆ. ಜಾಹ್ನವಿ ಅವರ ಕುಟುಂಬ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ಸುಮಾರು 29 ಮಿಲಿಯನ್ ಡಾಲರ್ ಅಂದರೆ ಅಂದಾಜು 262 ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ನೀಡಲು ಸೂಚಿಸಿದೆ.






















