Home Advertisement
Home ಸುದ್ದಿ ವಿದೇಶ ಬಾಂಗ್ಲಾದೇಶ ಚುನಾವಣಾ ಫಲಿತಾಂಶ: ಗೆಲುವಿನತ್ತ ಸಾಗಿದ BNP

ಬಾಂಗ್ಲಾದೇಶ ಚುನಾವಣಾ ಫಲಿತಾಂಶ: ಗೆಲುವಿನತ್ತ ಸಾಗಿದ BNP

0
76

ಬಾಂಗ್ಲಾದೇಶದಲ್ಲಿ ಹೊಸ ರಾಜಕೀಯ ಅಧ್ಯಾಯ: BNP ನಿರ್ಣಾಯಕ ಜಯಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಢಾಕಾ: ಬಾಂಗ್ಲಾದೇಶದಲ್ಲಿ ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ನಿರ್ಣಾಯಕ ಗೆಲುವಿನತ್ತ ಸಾಗಿದ್ದು, ಪಕ್ಷದ ಮುಖ್ಯಸ್ಥ ತಾರಿಕ್ ರೆಹಮಾನ್ ಪ್ರಧಾನಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಅಂತಿಮ ಫಲಿತಾಂಶಗಳು ಇನ್ನೂ ಪ್ರಕಟವಾಗಬೇಕಿದ್ದರೂ, ಬಿಎನ್‌ಪಿ ನೇತೃತ್ವದ ಮೈತ್ರಿಕೂಟ ಸರ್ಕಾರ ರಚಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ಚುನಾವಣೆಯ ಪ್ರಾಥಮಿಕ ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಾರಿಕ್ ರೆಹಮಾನ್ ಹಾಗೂ ಬಿಎನ್‌ಪಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಸಂದೇಶ ನೀಡಿದ ಅವರು, “ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು ಬಾಂಗ್ಲಾದೇಶದ ಜನರು ನಿಮ್ಮ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಹೊಸಕೋಟೆ: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – 7 ಜನ ಸಾವು

ಮತ್ತೊಂದು ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ, “ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶ ನಿರ್ಮಾಣಕ್ಕೆ ಭಾರತ ಸದಾ ಬೆಂಬಲ ನೀಡಲಿದೆ” ಎಂದು ಭರವಸೆ ನೀಡಿದ್ದಾರೆ.

ಈ ಚುನಾವಣೆ 2024ರಲ್ಲಿ ನಡೆದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳ ನಂತರ ಹಾಗೂ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತ ಪತನಗೊಂಡ ಬಳಿಕ ನಡೆದ ಮೊದಲ ರಾಷ್ಟ್ರೀಯ ಚುನಾವಣೆ ಎಂಬ ಕಾರಣಕ್ಕೆ ವಿಶೇಷ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲೇ ನಡೆದ ಚುನಾವಣೆಯಲ್ಲಿ ಬಿಎನ್‌ಪಿ ನೇತೃತ್ವದ ಮೈತ್ರಿಕೂಟ ಭರ್ಜರಿ ಬೆಂಬಲ ಪಡೆದುಕೊಂಡಿದೆ.

ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಕ್ಕೆ ಷರತ್ತು ಬದ್ಧ ಅನುಮತಿ

ರಾಜಕೀಯ ವಿಶ್ಲೇಷಕರ ಪ್ರಕಾರ, ಈ ಗೆಲುವು ಬಾಂಗ್ಲಾದೇಶದ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿದೆ. ಆರ್ಥಿಕ ಪುನಶ್ಚೇತನ, ಪ್ರಜಾಪ್ರಭುತ್ವ ಬಲಪಡಿಕೆ ಹಾಗೂ ಅಂತಾರಾಷ್ಟ್ರೀಯ ಸಂಬಂಧಗಳ ಸುಧಾರಣೆ ಹೊಸ ಸರ್ಕಾರದ ಪ್ರಮುಖ ಸವಾಲುಗಳಾಗಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸೇರಿದಂತೆ ಹಲವು ದೇಶಗಳ ನಾಯಕರು ಮತ್ತು ಗಣ್ಯರು ಬಿಎನ್‌ಪಿ ಗೆಲುವಿಗೆ ಶುಭಾಶಯ ಕೋರಿದ್ದು, ಬಾಂಗ್ಲಾದೇಶದೊಂದಿಗೆ ಸಹಕಾರ ಮುಂದುವರಿಸಲು ಸಿದ್ಧತೆ ವ್ಯಕ್ತಪಡಿಸಿದ್ದಾರೆ.

Previous articleಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಅನುದಾನಕ್ಕೆ ಆಗ್ರಹ
Next articleಕರ್ನಾಟಕ ಕೈಗಾರಿಕಾ ಕ್ಷೇತ್ರಕ್ಕೆ ಹೊಸ ಉತ್ತೇಜನ: FAR ಪರಿಷ್ಕರಣೆ ಜಾರಿ