ಧಾರವಾಡ: ನೂತನವಾಗಿ ಜಿಲ್ಲಾಧಿಕಾರಿಯಾಗಿ ಆಗಮಿಸಿದ ಸ್ನೇಹಲ್ ರಾಯಮಾನೆ ಅವರಿಗೆ ಇತ್ತೀಚೆಗೆ ನಾಗಾ ಸಾಧುಗಳು ಆಶೀರ್ವಾದ ಮಾಡಿದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಈ ಹಿಂದೆ ಧಾರವಾಡ ಜಿ.ಪಂ. ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದ ಸ್ನೇಹಲ್ ಆರ್. ಅವರು ಕಳೆದ ಮೂರು ದಿನಗಳ ಹಿಂದಷ್ಟೇ ಮರಳಿ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಗೊಂಡು ಅಧಿಕಾರ ವಹಿಸಿಕೊಂಡಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಇಲ್ಲಿಯ ಕರ್ನಾಟಕ ಕಾಲೇಜು ಬಳಿ ಇರುವ ವಿಘ್ನನಿವಾರಕ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆಗೂ ಮುನ್ನ 40 ವೀರಯೋಧರ ಪ್ರಾಣತ್ಯಾಗ ಮರೆಯದಿರಿ; ಜೈ ಜವಾನ್!
ಇದೇ ಸಮಯಕ್ಕೆ ದೇವಸ್ಥಾನಕ್ಕೆ ಆಗಮಿಸಿದ ನಾಗಾ ಸಾಧುಗಳು ದೇವರ ದರ್ಶನ ಪಡೆದು ನಂತರ ಅಲ್ಲಿಯೇ ಇದ್ದ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರಿಗೆ ಎಲ್ಲವೂ ಶುಭವಾಗಲಿ ಎಂದು ಹೇಳಿ ಆಶೀರ್ವಾದ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.






















