Home Advertisement
Home ನಮ್ಮ ಜಿಲ್ಲೆ ಹಾವೇರಿ ಸಾವಿರ ದಿನಗಳ ಸಾಧನೆ: GDP, GST ಸಂಗ್ರಹದಲ್ಲಿ ಕರ್ನಾಟಕ ದಾಖಲೆ

ಸಾವಿರ ದಿನಗಳ ಸಾಧನೆ: GDP, GST ಸಂಗ್ರಹದಲ್ಲಿ ಕರ್ನಾಟಕ ದಾಖಲೆ

0
53

ಕೇಂದ್ರದ ಅನ್ಯಾಯದ ನಡುವೆಯೂ ರಾಜ್ಯದ ಸಾಧನೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಹಾವೇರಿ: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ. ಇದುವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ನೀಡಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರದ ಸಾವಿರ ದಿನಗಳ ಸಾಧನೆ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಜಿಡಿಪಿಯನ್ನು ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ತಂದು ನಿಲ್ಲಿಸಿರುವುದು ನಮ್ಮ ಜನಪರ ಆಡಳಿತದ ಫಲಿತಾಂಶವಾಗಿದೆ ಎಂದರು. ಕಂದಾಯ ಇಲಾಖೆಗೆ ಸಚಿವ ಕೃಷ್ಣಬೈರೇಗೌಡರು ಅಧಿಕಾರ ವಹಿಸಿಕೊಂಡ ಬಳಿಕ ಕ್ರಾಂತಿಕಾರಿ ಬದಲಾವಣೆ ಕಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭರವಸೆ ಪಾಲನೆ ಮುಂದುವರಿಯಲಿದೆ: ಹಾವೇರಿಯಲ್ಲಿ ಸಿಎಂ ಭರವಸೆ

ಕೇಂದ್ರದ ಅನ್ಯಾಯದ ನಡುವೆಯೂ ಸಾಧನೆ: ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಸರ್ಕಾರ ಹಲವು ದಾಖಲೆ ಸಾಧನೆಗಳನ್ನು ಮಾಡಿದೆ. ಆದರೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಗದೀಶ ಶೆಟ್ರ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಮೌನ ವಹಿಸಿದ್ದಾರೆ ಎಂದು ಟೀಕಿಸಿದರು.

ಭರವಸೆ ಈಡೇರಿಕೆಯಲ್ಲಿ ಮುಂಚೂಣಿ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ 9 ತಿಂಗಳು ಪೂರ್ಣಗೊಂಡಿದೆ. ಈ ಅವಧಿಯಲ್ಲಿ ನೀಡಿದ್ದ 592 ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಲಾಗಿದೆ. ಉಳಿದ ಅವಧಿಯಲ್ಲಿ ಉಳಿದ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. 2018–23ರ ಅವಧಿಯಲ್ಲಿಯೂ ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ನಿರ್ಮಿಸಿದ್ದೇವೆ ಎಂದರು.

ಇದನ್ನೂ ಓದಿ: ಮುಂಬೈನಲ್ಲಿ ಮೆಟ್ರೋ ಕಾಮಗಾರಿ ದುರಂತ: ಸ್ಲ್ಯಾಬ್ ಕಂಬ ಕುಸಿದು ಒಬ್ಬ ಸಾವು, 3 ಜನರಿಗೆ ಗಾಯ

ಗ್ಯಾರಂಟಿ ಯೋಜನೆಗಳಿಂದ ₹1.18 ಲಕ್ಷ ಕೋಟಿ ನೆರವು: ಬಿಜೆಪಿ ಸರ್ಕಾರ ಖಜಾನೆ ಖಾಲಿಯಾಗಿದೆ ಎಂದು ಸುಳ್ಳು ಪ್ರಚಾರ ನಡೆಸುತ್ತಿದೆ. ಆದರೆ ಗ್ಯಾರಂಟಿ ಯೋಜನೆಗಳ ಮೂಲಕ ಇದುವರೆಗೆ ₹1,18,000 ಕೋಟಿ ರೂಪಾಯಿಗಳನ್ನು ನೇರವಾಗಿ ಜನರಿಗೆ ತಲುಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಖ್ಯಾತ ಆರ್ಥಿಕ ತಜ್ಞರು, ವಿವಿಧ ದಿನಪತ್ರಿಕೆಗಳು ಹಾಗೂ ವಿಶ್ವವಿದ್ಯಾಲಯಗಳ ಅಧ್ಯಯನಗಳು ಸದಭಿಪ್ರಾಯ ವ್ಯಕ್ತಪಡಿಸಿವೆ ಎಂದು ಹೇಳಿದರು.

ಸಮಗ್ರ ಅಭಿವೃದ್ಧಿಯೇ ಗುರಿ: ನಮ್ಮ ಸರ್ಕಾರ ಎಲ್ಲ ಜಾತಿ, ಧರ್ಮ, ಭಾಷೆಯ ಜನರನ್ನು ಒಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಅಸಮಾನತೆ ನಿವಾರಣೆಯೇ ನಮ್ಮ ಗುರಿ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಕಾರ್ಮಿಕರ ಪರವಾಗಿ ನಾವು ಸದಾ ನಿಲ್ಲುತ್ತೇವೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಐತಿಹಾಸಿಕ ಕ್ಷಣ: ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಪ್ರಧಾನಿ ಮೋದಿ ವಿಮಾನ ಲ್ಯಾಂಡಿಂಗ್

ಕೇಂದ್ರ ಸರ್ಕಾರದಿಂದ ಅನುದಾನ ಸಿಗದಿದ್ದರೂ ಸಾವಿರ ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. ನುಡಿದಂತೆ ನಡೆದು ತೋರಿಸುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಅವರು ತಿಳಿಸಿದರು.

Previous articleಭರವಸೆ ಪಾಲನೆ ಮುಂದುವರಿಯಲಿದೆ: ಹಾವೇರಿಯಲ್ಲಿ ಸಿಎಂ ಭರವಸೆ
Next article500 ರೂಪಾಯಿ ಕೊಟ್ರು ಗುಲಾಬಿಗಳ ಹೂಗುಚ್ಛ ಸಿಗೋದು ಕಷ್ಟ; ಪ್ರೇಮಿಗಳ ದಿನಕ್ಕೆ ಭರ್ಜರಿ ವ್ಯಾಪಾರ!