SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಕಾಂಗ್ರೆಸ್​ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು

ಕಾಂಗ್ರೆಸ್​ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು

0
366

ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಪ್ರಕಟಿಸಿದೆ.

ಅಸಿಂಧುಗೊಳಿಸಿದ ಆದೇಶವನ್ನು ಚುನಾವಣಾ ಆಯೋಗಕ್ಕೆ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಿಲು ಹೈಕೋರ್ಟ್‌ ಸೂಚಿಸಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಬಿಜೆಪಿ ಅಭ್ಯರ್ಥಿ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠ, ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶ ನೀಡಿದೆ.

ಇದನ್ನೂ ಓದಿ: ಶಬರಿಮಲೆ ಮಹಿಳೆಯರ ಪ್ರವೇಶ: ಏ. 7ರಿಂದ ಅಂತಿಮ ವಿಚಾರಣೆ

ಸುಬ್ಬಾರೆಡ್ಡಿ ಅವರು ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಅವರು ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಕೋರಿ ಅರ್ಜಿ ಸಲ್ಲಿಸಿದ್ದರು.