Home Advertisement
Home ನಮ್ಮ ಜಿಲ್ಲೆ ವಿಜಯಪುರ ವೈದ್ಯರ ನಿರ್ಲಕ್ಷ್ಯ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ, ಮಗು ಸಾವು

ವೈದ್ಯರ ನಿರ್ಲಕ್ಷ್ಯ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ, ಮಗು ಸಾವು

0
217

ವಿಜಯಪುರ: ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗು ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಿಂದಗಿಯ ವಿದ್ಯಾನಗರದ 4ನೇ ಕ್ರಾಸ್ ನಿವಾಸಿ ಮೈತ್ರಾ ಸುಂಗಠಾಣ (26) ಮೃತಪಟ್ಟವರು. ಮೈತ್ರಾ ಫೆ. 18ರಂದು ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲಾಗಿದ್ದು, ಅಂದೇ ಮಗುವಿಗೆ ಜನ್ಮ ನೀಡಿದ್ದರು. ಅತೀ ರಕ್ತಸ್ರಾವದಿಂದ ಬಳಲುತ್ತಿದ್ದರು. ಚಿಕಿತ್ಸೆ ನೀಡದೇ ಇದ್ದುದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಂದಗಿ ತಾಲೂಕಾಸ್ಪತ್ರೆ ವೈದ್ಯರ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರು ಹಾಗೂ ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದಾರೆ.