ಬೆಂಗಳೂರು: ಮುಡಾ ಹಗರಣದ ರೂವಾರಿ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನ ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ನಗರದ ಸಿಟಿ ಸಿವಿಲ್ ಕೋರ್ಟ್ ಹತ್ತಿರ ಸ್ನೇಹಮಯಿ ಕೃಷ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಮುಡಾ ಮಾಜಿ ಆಯುಕ್ತ ನಟೇಶ್ ಅವರು ನೀಡಿದ ದೂರಿನ ಅನ್ವಯ ಸೈಬರ್ ಕ್ರೈಮ್ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ವಿಜಯಪುರದಲ್ಲಿ ದ್ರಾಕ್ಷಿ ಕ್ರಾಂತಿ: ‘California’ ಕನಸು ನನಸಾಗುತ್ತಿದೆ
ನಟೇಶ್ ದೂರಿನಲ್ಲಿ ಏನಿದೆ?: ನಟೇಶ್ ವಿರುದ್ಧ ಇತ್ತೀಚೆಗಷ್ಟೇ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ಡಿ.ಬಿ. ನಟೇಶ್ ಅವರು ತಮಗೆ ಮುಂಬಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ 1.60 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದರು.
ಈ ಕುರಿತಂತೆ ಮುಡಾ ಮಾಜಿ ಆಯುಕ್ತ ನಟೇಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. “ನಾನು ಯಾರಿಗೂ ಯಾವುದೇ ಹಣ ನೀಡಿಲ್ಲ, ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾಗಿದ್ದು, ಆಧಾರ ರಹಿತವಾಗಿವೆ ಎಂದು ದೂರಿನಲ್ಲಿ ತಿಳಿಸಿದ್ದರು.
ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಬೇರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಸಿಟಿ ಸಿವಿಲ್ ಕೋರ್ಟ್‌ಗೆ ಬಂದಿದ್ದ ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.






















