SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಕಳುವಾಗಿದ್ದ ಸ್ವತ್ತನ್ನು ಮಾಲೀಕರಿಗೆ ಮರಳಿಸಿದ ಪೊಲೀಸ್‌

ಕಳುವಾಗಿದ್ದ ಸ್ವತ್ತನ್ನು ಮಾಲೀಕರಿಗೆ ಮರಳಿಸಿದ ಪೊಲೀಸ್‌

0
493

ಉತ್ತರ ಕನ್ನಡ(ದಾಂಡೇಲಿ): ಕಳವಿನ ಸ್ವತ್ತು ವಶಪಡಿಸಿಕೊಂಡು ಮೂಲ ಮಾಲೀಕರಿಗೆ ಒಪ್ಪಿಸಿದ ದಾಂಡೇಲಿ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಶುಕ್ರವಾರ ಸಂಜೆ ದಾಂಡೇಲಿ ನಗರ ಪೊಲೀಸ್‌ ಠಾಣೆಯ ಸಭಾಂಗಣದಲ್ಲಿ ಡಿವೈಎಸ್ಪಿ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ ಸ್ವತ್ತುಗಳನ್ನು ಪೊಲೀಸರು ಪತ್ತೆ ಹಚ್ಚಿ ಮೂಲ ಮಾಲೀಕರಿಗೆ ಒಪ್ಪಿಸಿದರು.

ಇದರಲ್ಲಿ ಬಂಗಾರದ ಆಭರಣ, ಮೊಬೈಲ್‌, ಬೈಕ್‌ಗಳು ಸೇರಿವೆ. ಕಳುವಾದ ಸ್ವತ್ತುಗಳು ಪೊಲೀಸರ ಕಾರ್ಯಕ್ಷಮತೆಯಿಂದ ಮರಳಿ ದೊರೆತ ಕುರಿತು ಮೂಲ ಮಾಲೀಕರು ಹರ್ಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್: ಕರ್ನಾಟಕ ತಂಡ ಪ್ರಕಟ-ಭರ್ಜರಿ ಸಿದ್ಧತೆ

ಈ ಸಂದರ್ಭದಲ್ಲಿ ಮಾತನಾಡಿದ ಡಿ.ವೈಎಸ್ಪಿ ಶಿವಾನಂದ ಮದರಖಂಡಿ, ಸಾರ್ವಜನಿಕರು ಆದಷ್ಟು ಜಾಗ್ರತೆಯಿಂದಿರಬೇಕು. ಚಿನ್ನದ ಬೆಲೆ ಒಂದೂವರೆ ಲಕ್ಷ ದಾಟಿದೆ. ಮುನ್ನೆಚ್ಚರಿಕೆಯ ಕ್ರಮಕ್ಕಾಗಿ ಮನೆ, ಅಂಗಡಿಗಳ ಮುಂದೆ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯ. ಅಪರಾಧ ಘಟಿಸಿದಾಗ ತನಿಖೆಗೆ ಸಿಸಿ ಕ್ಯಾಮೆರಾಗಳು ಸಹಕಾರಿಯಾಗಲಿದೆ. ಜನರು ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಬೇಕು ಎಂದರು.