Home Advertisement
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

0
17

ಚಿಕ್ಕಮಗಳೂರು: ಆನೆ ದಾಳಿಯಿಂದ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ನಾಲ್ಕು ದಿನಗಳ ಅಂತರದಲ್ಲಿ ಎರಡನೆಯ ಪ್ರಕರಣ ಇದಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಭಾನುವಾರ ಕೊಪ್ಪ ಅರಣ್ಯ ವಿಭಾಗದ ಹುಣಸೆಹಳ್ಳಿ, ಪುರ ಬಳಿಯ ನಾಗೇಶಗೌಡರ ತೋಟದಲ್ಲಿ ಕಾಡಾನೆ ದಾಳಿಗೆ ಕೂಡ್ಲಿಗಿ ಮೂಲದ ಕೂಲಿ ಕಾರ್ಮಿಕರಾದ ಬೋರಮ್ಮ ಬಲಿಯಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಇದೆ ತೋಟದಲ್ಲಿ ಕಾಡಾನೆ ದಾಳಿಗೆ ಯಶೋಧ ಎಂಬುವವರು ಮೃತಪಟ್ಟಿದ್ದರು.

ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬಾಳೆಹೊನ್ನೂರು ಆರ್.ಎಫ್.ಓ ಕಚೇರಿ ಎದುರು ಪ್ರತಿಭಟನೆ ನಡೆದಿತ್ತು. ತಕ್ಷಣ ಸ್ಪಂದಿಸಿದ ಅಧಿಕಾರಿಗಳು/ ಶಾಸಕರು ಆನೆ ಓಡಿಸಲು ಕ್ರಮ ಕೈಗೊಂಡಿದ್ದು, ಆನೆಯನ್ನು ಗಡಿ ದಾಟಿಸಲಾಗಿದೆ ಎಂದು ಹೇಳಿದ್ದರು.

ಕಾರ್ಯಾಚರಣೆಗೆ ಬಂದಿರುವ ನಾಲ್ಕು ಆನೆಗಳು ಬೀಡು ಬಿಟ್ಟಿರುವ ಮಧ್ಯೆ ಮತ್ತೆ ಆನೆ ದಾಳಿಗೆ ಮಹಿಳೆ ಬಲಿಯಾಗಿರುವುದು ಸ್ಥಳೀಯರನ್ನು ಕೆರಳಿಸಿದೆ.

Previous articleಭಾರತದ ಮೈಲಿಗಲ್ಲು: ₹3,700 ಕೋಟಿ ಚಿಪ್ ಘಟಕಕ್ಕೆ ಶಿಲಾನ್ಯಾಸ
Next articleಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿ ಭಾರತ