Home Advertisement
Home ನಮ್ಮ ಜಿಲ್ಲೆ ಉತ್ತರ ಕನ್ನಡ ಶಾಸಕರು ಬಾಯಿ ಮುಚ್ಚಿಕೊಂಡು ಸುಮ್ಮನಿದ್ದರೆ ಒಳ್ಳೆಯದು…

ಶಾಸಕರು ಬಾಯಿ ಮುಚ್ಚಿಕೊಂಡು ಸುಮ್ಮನಿದ್ದರೆ ಒಳ್ಳೆಯದು…

0
85

ಕಾರವಾರ: ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಹಾಗೂ ಸ್ವಪಕ್ಷದ ಶಾಸಕರ ಹೇಳಿಕೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರವಾರದಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಾಯುಕ್ತವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದರ ತನಿಖಾ ವಿಷಯಗಳಲ್ಲಿ ತಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಈ ಪ್ರಕರಣದ ಬಗ್ಗೆ ಬಿಜೆಪಿಯವರೇ ಉತ್ತರಿಸಬೇಕು ಮತ್ತು ಅವರೇ ವ್ಯಾಖ್ಯಾನ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು.

ಇದನ್ನೂ ಓದಿ: ಅಬ್ಬಾ…! ಒಂದೇ ಮನೆಯಲ್ಲಿ ಬರೋಬ್ಬರಿ ಆರು ಹೆಬ್ಬಾವು ಪ್ರತ್ಯಕ್ಷ

​ಇದೇ ವೇಳೆ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿರುವ ಶಾಸಕ ಇಕ್ಬಾಲ್ ಹುಸೇನ್, ರವಿ ಮತ್ತು ಶಿವಗಂಗಾ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ, “ಅವರೆಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿದ್ದರೆ ನನಗೆ ಮತ್ತು ಪಕ್ಷಕ್ಕೆ ಒಳ್ಳೆಯದು” ಎಂದು ಎಚ್ಚರಿಕೆ ನೀಡಿದರು.

ವಿದೇಶ ಪ್ರವಾಸಕ್ಕೆ ತೆರಳಿರುವ ಶಾಸಕರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಹೋದವರೆಲ್ಲರೂ ನಮ್ಮವರೇ, ಅವರು ಮರಳಿದ ನಂತರ ಪ್ರವಾಸದ ಉದ್ದೇಶದ ಬಗ್ಗೆ ವಿಚಾರಿಸುತ್ತೇವೆ” ಎಂದು ತಿಳಿಸಿದರು.

Previous articleಬೆಂಕಿಯಲ್ಲಿ ಹೊತ್ತಿ ಉರಿದ ಬೆಣ್ಣೆದೋಸೆ ಹೋಟೆಲ್
Next articleಬಾಗಲಕೋಟೆ ಘಟನೆಗೆ ಹಿಂದೂ ಪರ ಸಂಘಟನೆಗಳ ಆಕ್ರೋಶ