Home Advertisement
Home ನಮ್ಮ ಜಿಲ್ಲೆ ಉತ್ತರ ಕನ್ನಡ ಮಾರಿಕಾಂಬೆ ಜಾತ್ರೆ: ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು

ಮಾರಿಕಾಂಬೆ ಜಾತ್ರೆ: ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು

0
25

ಹುಬ್ಬಳ್ಳಿ: ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರುವರಿ 27 (ಶುಕ್ರವಾರ) ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಫೆ. 28) ಬೆಳಿಗ್ಗೆ 5.05ಕ್ಕೆ ತಾಳಗುಪ್ಪ ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಫೆಬ್ರವರಿ 28 (ಶನಿವಾರ) ರಂದು ಬೆಳಿಗ್ಗೆ 9.30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ಸೇರಲಿದೆ.

ಇದನ್ನೂ ಓದಿ: ಕೊಪ್ಪಳ ಬಂದ್: ಒಂದು ವರ್ಷದ ಹೋರಾಟ ನಿರ್ಣಾಯಕ ಹಂತಕ್ಕೆ

ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ.

Previous articleವೈದ್ಯಕೀಯ ಸೇವೆ ಬಂದ್: 2 ಹಂತದ ಮುಷ್ಕರ ಘೋಷಣೆ
Next articlePRAHAR ಅನಾವರಣ: ಹೊಸ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ ಪ್ರಕಟ