ಬೆಂಗಳೂರು: ಕಾಂಗ್ರೆಸ್ಸಿನವರು ಬಟ್ಟೆ ಬಿಚ್ಚಿಕೊಂಡರೂ ವಿಬಿ ಜಿ ರಾಮ್ ಜಿ ಯೇ ಊರ್ಜಿತವಾಗಲಿದೆ. ಆದ್ದರಿಂದ ವ್ಯರ್ಥ ಪ್ರಯತ್ನ ಮಾಡಬೇಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಲಹೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ವಿಬಿ ಜಿ ರಾಮ್ ಜಿ ಜಾಗೃತಿಗಾಗಿ ಎಲ್ಲ ಕಡೆ ಕಾರ್ಯಕ್ರಮ ನಡೆಸಿದ್ದೇವೆ. ಇಡೀ ದೇಶವ್ಯಾಪಿ ಬೆಂಬಲವೂ ವ್ಯಕ್ತವಾಗಿದೆ. ಅದನ್ನು ವಾಪಸ್ ಪಡೆಯುವ ಸಂದರ್ಭ ಒದಗಿಬರಲಾರದು ಎಂದು ತಿಳಿಸಿದರು.
ಇದನ್ನೂ ಓದಿ: ದರ್ಶನ್ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಚಿಕ್ಕಬಳ್ಳಾಪುರದಲ್ಲಿ ಮತ್ತೆ ಮನ್‌ರೇಗಾ ಬೇಕೆಂದು ಕಾಂಗ್ರೆಸ್ ನಾಯಕರು ಹೋರಾಟ ಮಾಡಿದ್ದಾರೆ. ನಿನ್ನೆ ಶೃಂಗಸಭೆ ವಿರೋಧಿಸಲು ಎಷ್ಟು ಬಟ್ಟೆ ಬಿಚ್ಚಿಕೊಂಡಿದ್ದೀರೋ ಅದಕ್ಕಿಂತ ಹೆಚ್ಚು ಬಟ್ಟೆ ಬಿಚ್ಚಿಕೊಂಡರೂ ಜಿ ರಾಮ್ ಜಿ ಊರ್ಜಿತವಾಗಲಿದೆ ಎಂದರು.























