ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಸರ್ಕಾರದ ಸಹಕಾರ: ಸಿಎಂ ಭರವಸೆ
ಕಾರ್ಕಳ (ಉಡುಪಿ ಜಿಲ್ಲೆ): ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಶಿಕ್ಷಣವೇ ಇಂದಿನ ಸಮಾಜದ ಅವಶ್ಯಕತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶವಾಗಬೇಕು ಎಂದು ಅವರು ಒತ್ತಿ ಹೇಳಿದರು.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ವೈಯಕ್ತಿಕ ಬದುಕಿನ ಅನುಭವಗಳನ್ನು ಹಂಚಿಕೊಂಡರು.
ಇದನ್ನೂ ಓದಿ: ವೈರಲ್ ವಿಡಿಯೋ ಶಾಕ್: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗ ದೂರು
“ನಾನು ಕುಟುಂಬದ ಮೊದಲ ಪದವೀಧರ. ಕಷ್ಟದ ಜೀವನವನ್ನು ಅನುಭವಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಂತೆ ಬಡವರ್ಗದ ಪರ ನಿಂತು ಸಮಾಜ ಸೇವೆ ಮಾಡುವುದು ರಾಜಕೀಯದ ನಿಜವಾದ ಅರ್ಥ” ಎಂದು ಹೇಳಿದರು.
ವೀರಪ್ಪ ಮೊಯ್ಲಿ ಸೇವೆ ಪ್ರಶಂಸೆ : ವೀರಪ್ಪ ಮೊಯ್ಲಿಯವರು ತಮ್ಮ ವಕೀಲ ವೃತ್ತಿಯಲ್ಲಿ ಬಡವರಿಗೆ ಉಚಿತ ವಕಾಲತ್ತು ಮಾಡುತ್ತಿದ್ದು, ಪ್ರಾಮಾಣಿಕ ರಾಜಕೀಯ ಜೀವನವನ್ನು ನಡೆಸಿದ್ದಾರೆ. ಕಾರ್ಕಳದಲ್ಲಿ ಕಿಸಾನ್ ಸಭಾ ಆರಂಭಿಸಿ ನಂತರ ಪ್ರೌಢಶಾಲೆ ಸ್ಥಾಪಿಸಿ, ನಿರ್ಗತಿಕ ಮತ್ತು ಓದಿನಲ್ಲಿ ಹಿಂದುಳಿದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸಂತಸದ ಸಂಗತಿ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಹೋಳಿ ವಿಶೇಷ: ಹುಬ್ಬಳ್ಳಿ–ಮುಜಾಫರ್‌ಪುರ ನಡುವೆ ವಿಶೇಷ ರೈಲು
ಈ ಶಾಲೆಯು 35 ವರ್ಷ ಪೂರೈಸಿರುವುದನ್ನು ಉಲ್ಲೇಖಿಸಿ, “ಇಲ್ಲಿನ ವಿದ್ಯಾರ್ಥಿಗಳು ವೈಚಾರಿಕತೆ ಹಾಗೂ ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು” ಎಂದು ಅವರು ಹೇಳಿದರು.
ಶಿಕ್ಷಣದ ಉದ್ದೇಶ – ಸಮಾನ ಅವಕಾಶ : ಅಸಮಾನತೆಯಿಂದ ಕೂಡಿದ ಸಮಾಜದಲ್ಲಿ ಶೂದ್ರ ವರ್ಗ ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿದ್ದನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವಿಲ್ಲದೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲವೆಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದಾರೆ ಎಂಬುದನ್ನು ಸ್ಮರಿಸಿದರು.
“ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ. ಸಮಾನ ಅವಕಾಶಗಳನ್ನು ಒದಗಿಸುವುದೇ ಶಿಕ್ಷಣದ ಮೂಲ ತತ್ವವಾಗಬೇಕು” ಎಂದು ಅವರು ಹೇಳಿದರು.
ಇದನ್ನೂ ಓದಿ: ಹುಬ್ಬಳ್ಳಿ: ರಣಜಿ ಫೈನಲ್‌ನಲ್ಲಿ ಗಲಾಟೆ – ಮೈದಾನದಲ್ಲೇ ಕರ್ನಾಟಕದ ಆಟಗಾರನಿಗೆ ಡಿಚ್ಚಿ
ಭರವಸೆಗಳ ಈಡೇರಿಕೆ : 2013ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ನೀಡಿದ 165 ಭರವಸೆಗಳಲ್ಲಿ 158 ಅನ್ನು ಈಡೇರಿಸಲಾಗಿದೆ ಎಂದು ಅವರು ಹೇಳಿದರು. 2023ರಲ್ಲಿ ಪುನಃ ಅಧಿಕಾರಕ್ಕೆ ಬಂದ ಬಳಿಕ 590 ಭರವಸೆಗಳನ್ನು ನೀಡಿದ್ದು, ಕಳೆದ ಎರಡೂವರೆ ವರ್ಷಗಳಲ್ಲಿ 243 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳಿಗೆ ಭಾರಿ ವೆಚ್ಚ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ₹52,000 ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಇದುವರೆಗೆ ₹1.20 ಲಕ್ಷ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಜಾತಿ-ಧರ್ಮ ಭೇದವಿಲ್ಲದೆ ಎಲ್ಲ ಬಡವರಿಗೆ ಈ ಸವಲತ್ತುಗಳನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಮಕ್ಕಳ ರಕ್ಷಣೆ: ಅಸಭ್ಯ ವಿಷಯ ಪ್ರಸಾರ ಮಾಡಿದ 5 OTTಗಳು ಬ್ಯಾನ್
ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಸಹಕಾರ : ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ ಐತಿಹಾಸಿಕ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಸರ್ಕಾರ ಅಗತ್ಯ ಸಹಕಾರ ಮತ್ತು ಆರ್ಥಿಕ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.























