ಮೈಸೂರು: ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರೋಗ್ಯ ಇಲಾಖೆಯ ಆಹ್ವಾನ ಪತ್ರಿಕೆಯಲ್ಲಿ ಉರ್ದು ಭಾಷೆ ಮುದ್ರಿತವಾಗಿದ್ದು, ಈ ಬಗ್ಗೆ ಚರ್ಚೆಗಳೆದ್ದಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದರು.
ಇದನ್ನೂ ಓದಿ: ವೈರಲ್ ವಿಡಿಯೋ ಶಾಕ್: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗ ದೂರು
ಬಿಜೆಪಿ ತನ್ನ ಅವಧಿಯಲ್ಲಿ ಉದ್ಯೋಗ ನೀಡಲಿಲ್ಲ: ಧಾರವಾಡದಲ್ಲಿ ವಿದ್ಯಾರ್ಥಿ ಪ್ರತಿಭಟನೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್‌ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದರು.























