SK Home Ad
Home ಸುದ್ದಿ ವಿದೇಶ ಮಧ್ಯಪ್ರಾಚ್ಯದಲ್ಲಿ ಯುದ್ಧ: ರಕ್ಷಣೆಗೆ ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ

ಮಧ್ಯಪ್ರಾಚ್ಯದಲ್ಲಿ ಯುದ್ಧ: ರಕ್ಷಣೆಗೆ ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ

0
374

ಕಲಬುರಗಿ: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸಿರುವ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರಂಭಿಸಿರುವ ಸಹಾಯವಾಣಿಗಳ ಸಹಾಯ ಪಡೆಯುವಂತೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಕರ್ನಾಟಕ ಸೇರಿ ಕಲಬುರಗಿಯ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಪ್ರಸ್ತುತ ನೆಲೆಸಿರುವ ಕಲಬುರಗಿ ಜಿಲ್ಲೆಯ ನಿವಾಸಿಗಳು ಮತ್ತು ಸಹಾಯದ ಅಗತ್ಯವಿರುವವರು ಆಯಾ ಭಾರತೀಯ ರಾಯಭಾರ ಕಚೇರಿಗಳ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ರಾಯಭಾರ ಕಚೇರಿಗಳೊಂದಿಗೆ ಸಂಪರ್ಕದಲ್ಲಿರಲು ಮತ್ತು MEAಯ ಸಾರಥಿ ಸಹಾಯತಾ ಫೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವಂತೆ ಹಾಗೂ ಸರ್ಕಾರದ ಸೂಚನೆಗಳನ್ನು ಅನುಸರಿಸಲು ವಿನಂತಿಸಿದ್ದಾರೆ.

ಇದನ್ನೂ ಓದಿ: ಬಾಂಬ್‌ ದಾಳಿಯ ದೃಶ್ಯಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

ಕಲಬುರಗಿ ಜಿಲ್ಲೆಯ ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿಕೊಂಡಿದಲ್ಲಿ ಅಂತಹವರುಗಳ ಮಾಹಿತಿಯನ್ನು ಸಂಬಂಧಿಸಿದವರು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 08472-278677 ಹಾಗೂ ಪೊಲೀಸ್ ಕಂಟ್ರೋಲ್ ಸಂಖ್ಯೆ: 9480805500, 9480803500, 08472-263604, 228112 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.