Home Advertisement
Home ಸುದ್ದಿ ರಾಜ್ಯ ದಾಖಲೆಯ 17ನೇ ಬಜೆಟ್: CM ಸಿದ್ದರಾಮಯ್ಯ Live ವಿಡಿಯೋ ನೋಡಿ

ದಾಖಲೆಯ 17ನೇ ಬಜೆಟ್: CM ಸಿದ್ದರಾಮಯ್ಯ Live ವಿಡಿಯೋ ನೋಡಿ

0
134

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿ ಆಗಿ ದಾಖಲೆಯ 17ನೇ ಬಜೆಟ್ ಅನ್ನು ಇಂದು ಮಂಡಿಸಿಲಿದ್ದಾರೆ, ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿದೆ. Karnataka Budget 2026 ಮಂಡನೆಯ ಮೂಲಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ದಾಖಲೆಯನ್ನು ತಮ್ಮ ಹೆಸರಿನಲ್ಲಿ ದಾಖಲಿಸಿದ್ದಾರೆ.

ಲೈವ್ ವಿಡಿಯೋ: ನೋಡಿ Karnataka Budget 2026 LIVE | CM Siddaramaiah Budget in Karnataka Assembly | Samyukta Karnataka

ಈ ಹಿಂದೆ ರಾಮಕೃಷ್ಣ ಹೆಗಡೆ ಅವರು 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ ಅವರು 8 ಬಾರಿ ಬಜೆಟ್ ಮಂಡಿಸಿದ್ದರೆ, ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ಮೈಲುಗಲ್ಲು ನಿರ್ಮಿಸಿದ್ದಾರೆ.

ಬಜೆಟ್ ಅಧಿವೇಶನ ಮಾರ್ಚ್ 27ರವರೆಗೆ: ರಾಜ್ಯದ Karnataka Legislative Assembly ಹಾಗೂ Karnataka Legislative Council ಗಳಲ್ಲಿ ನಡೆಯಲಿರುವ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಒಟ್ಟು 14 ದಿನಗಳ ಕಾಲ ಬಜೆಟ್ ಸಂಬಂಧಿತ ಚರ್ಚೆಗಳು ನಡೆಯಲಿವೆ.

ವಿಧಾನಸಭೆಯಲ್ಲಿ ಬಜೆಟ್ ಮಂಡನೆಯ ನಂತರ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅನುದಾನ, ಯೋಜನೆಗಳು ಹಾಗೂ ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಸದಸ್ಯರು ಚರ್ಚೆ ನಡೆಸಲಿದ್ದಾರೆ.

ಈಗಾಗಲೇ ಮತ್ತೊಂದು ದಾಖಲೆ: ಸಿದ್ದರಾಮಯ್ಯ ಅವರು ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಅವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಾಯಕ ಎಂಬ ಹೆಗ್ಗಳಿಕೆಗೆ ಈ ವರ್ಷದ ಆರಂಭದಲ್ಲೇ ಪಾತ್ರರಾಗಿದ್ದಾರೆ. ಈಗ ದಾಖಲೆಯ 17ನೇ ಬಜೆಟ್ ಮಂಡನೆಯ ಮೂಲಕ ಮತ್ತೊಂದು ರಾಜಕೀಯ ಮೈಲುಗಲ್ಲು ನಿರ್ಮಿಸಿದ್ದಾರೆ.

ಜನರಿಗೆ ನೇರ ಪ್ರಸಾರ: ರಾಜ್ಯದ ಜನತೆಗೆ ಬಜೆಟ್ ಕುರಿತು ನೇರವಾಗಿ ಮಾಹಿತಿ ದೊರಕುವಂತೆ ವಿವಿಧ ಮಾಧ್ಯಮಗಳಲ್ಲಿ ಬಜೆಟ್ ಮಂಡನೆಯ ನೇರಪ್ರಸಾರ ವ್ಯವಸ್ಥೆ ಮಾಡಲಾಗಿದೆ. ಸುದ್ದಿ ಸಂಸ್ಥೆಗಳು ಹಾಗೂ ಡಿಜಿಟಲ್ ವೇದಿಕೆಗಳ ಮೂಲಕ ಜನರು ಬಜೆಟ್ ಭಾಷಣವನ್ನು ಲೈವ್ ವೀಕ್ಷಿಸುವ ಅವಕಾಶ ಪಡೆಯುತ್ತಿದ್ದಾರೆ.

2026-27ರ ಬಜೆಟ್‌ನಲ್ಲಿ ಸಾಮಾಜಿಕ ಕಲ್ಯಾಣ, ಮೂಲಸೌಕರ್ಯ ಅಭಿವೃದ್ಧಿ, ಕೃಷಿ ಮತ್ತು ಕೈಗಾರಿಕಾ ವಲಯಗಳಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಸೂಚಿಸಿವೆ. ಬಜೆಟ್ ಭಾಷಣದ ಬಳಿಕ ಮುಖ್ಯಮಂತ್ರಿ ಮಾಧ್ಯಮಗಳೊಂದಿಗೆ ಮಾತನಾಡಿ ಪ್ರಮುಖ ಘೋಷಣೆಗಳನ್ನು ವಿವರಿಸುವ ನಿರೀಕ್ಷೆಯಿದೆ.

ಲೈವ್​​ ವಿಡಿಯೋ ಇಲ್ಲಿದೆ ನೋಡಿ