SK Home Ad
Home ನಮ್ಮ ಜಿಲ್ಲೆ ಬಳ್ಳಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಸಂಘರ್ಷ: ಓರ್ವ ಬಾಲಕ ಸಾವು

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಸಂಘರ್ಷ: ಓರ್ವ ಬಾಲಕ ಸಾವು

0
532

ಬಳ್ಳಾರಿ: ನಗರದ ತಾಳೂರು ರಸ್ತೆಯ ಗುರುಕುಲ ರೆಸಿಡೆನ್ಸಿ ಹಾಸ್ಟೆಲ್‌ನಲ್ಲಿ ಶನಿವಾರ ಮಧ್ಯರಾತ್ರಿ ನಡೆದ ಗಲಾಟೆಯಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಆಂಧ್ರ ಮೂಲದ ನಿವಾಸಿ 9ನೇ ತರಗತಿ ವಿದ್ಯಾರ್ಥಿ ಹೇಮಂತ್ (14) ಮೃತಪಟ್ಟ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹಪಾಠಿ ಭರತ್ ಕುಮಾರ್ ಎಂಬಾತ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ.

ದಾಳಿಯಲ್ಲಿ ಆಂಧ್ರ ಮೂಲದ ಹೇಮಂತ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಲಾಟೆ ಬಿಡಿಸಲು ಬಂದ ವಾರ್ಡನ್ ಬಿಸ್ಲೆ ಹಾಗೂ ವಿದ್ಯಾರ್ಥಿ ವಿಷ್ಣು ಅವರಿಗೆ ಗಂಭೀರ ಗಾಯಗಳಾಗಿವೆ. ವಾರ್ಡನ್ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಳಿಕ ಆರೋಪಿ ವಿದ್ಯಾರ್ಥಿ ಭರತ್ ಸ್ಥಳದಿಂದ ಪರಾರಿಯಾಗಿದ್ದಾನೆ.