Home Advertisement
Home ನಮ್ಮ ಜಿಲ್ಲೆ ಯಾದಗಿರಿ ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

0
53

ಯಾದಗಿರಿ: ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಬಿಗ್ ಶಾಕ್ ನೀಡಿದೆ. ಪೋಕ್ಸೋ ಕೇಸ್ ಆರೋಪಿಯಾಗಿರುವ ಮುತ್ಯಾ ಯಾದಗಿರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಮುತ್ಯಾ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ತಿರಸ್ಕರಿಸಿದೆ. ಹೀಗಾಗಿ ಮುತ್ಯಾಗೆ ಬಂಧನ ಭೀತಿ ಎದುರಾಗಿದೆ.

ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಮಲ್ಲಿಕಾರ್ಜುನ್‌ ಮುತ್ಯಾ ತೆರೆಮರೆಯಲ್ಲಿ ಇದ್ದುಕೊಂಡೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ನ್ಯಾಯಾಲಯ ಮಲ್ಲಿಕಾರ್ಜುನ್ ಮುತ್ಯಾಗೆ ಶಾಕ್ ನೀಡಿದೆ. ಮುತ್ಯಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮಲ್ಲಿಕಾರ್ಜುನ್ ಮುತ್ಯಾಗೆ ಜಾಮೀನು ನೀಡದಂತೆ ಸರಕಾರಿ ವಕೀಲರು ಪ್ರಬಲವಾಗಿ ವಾದ ಮಂಡಿಸಿದ್ದರು. ಈ ಎಲ್ಲ ಅಂಶಗಳ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ತಿರಸ್ಕರಿಸಿದೆ.

ವಿಚಾರಣೆಗೆ ಪೊಲೀಸರ ಮುಂದೆ ಹಾಜರಾದ ಮುತ್ಯಾ ತೆರೆ ಮರೆಯಲ್ಲಿ ಇದ್ದೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಸಿಗುವ ವಿಶ್ವಾಸದಲ್ಲಿ ಇದ್ದ ಮುತ್ಯಾ ಹಾಗೂ ಆತನ ಭಕ್ತರಿಗೆ ಇಂದು ಭಾರೀ ಆಘಾತವಾಗಿದೆ.

ಮುತ್ಯಾ ಅವರು ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಹಪೂರ ತಾಲ್ಲೂಕಿನ ಮಹಲ್ ರೋಜಾ ಗ್ರಾಮದ ಮಠದ ಪೀಠಾಧಿಪತಿ. ಉತ್ತರ ಕರ್ನಾಟಕದಲ್ಲಿ ಅಪ್ಪಾಜಿ ಎಂದು ಭಕ್ತರು ಕರೆಯುತ್ತಾರೆ.