Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಒಂದೇ ಕೋಣೆಯ 15 ಜನ ಆಯ್ಕೆ: ಕೆಎಎಸ್ ಸಂದರ್ಶನ ಮುಂದೂಡಿಕೆ

ಒಂದೇ ಕೋಣೆಯ 15 ಜನ ಆಯ್ಕೆ: ಕೆಎಎಸ್ ಸಂದರ್ಶನ ಮುಂದೂಡಿಕೆ

0
8

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಕೆಎಎಸ್ ಪರೀಕ್ಷೆಯಲ್ಲಿ ಒಂದೇ ಕೋಣೆಯ 15 ಅಭ್ಯರ್ಥಿಗಳು ಆಯ್ಕೆಯಾಗಿರುವುದು ತೀವ್ರ ಅನುಮಾನಕ್ಕೆ ಕಾರಣವಾದ ಬೆನ್ನಲ್ಲೆ, ಇದೀಗ ಸಂದರ್ಶನವನ್ನು ಮುಂದೂಡಿ ಕೆಪಿಎಸ್‌ಸಿ ಆದೇಶ ಹೊರಡಿಸಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟಿಸಿದ್ದ ವ್ಯಕ್ತಿತ್ವ ಪರೀಕ್ಷೆಯ ವೇಳಾಪಟ್ಟಿಯನ್ನು ಆಡಳಿತಾತ್ಮಕ ಕಾರಣಗಳಿಂದ ಹಿಂಪಡೆದಿದೆ. ಈ ಹಿಂದೆ ಅಕ್ರಮದ ಬಗ್ಗೆ ಅಭ್ಯರ್ಥಿಗಳು ಆರೋಪಿಸಿದಾಗ, ಯಾವುದೇ ಸಮಸ್ಯೆಯಿಲ್ಲ ಎಂದಿದ್ದರು.

ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಮಾ. 23ರಿಂದ ಮೇ 4ರವರೆಗೆ ವಿವಿಧ ದಿನಾಂಕಗಳಲ್ಲಿ ನಡೆಸಲು ಉದ್ದೇಶಿಸಿದ್ದ ಸಂದರ್ಶನವನ್ನು ಮುಂದೂಡಲಾಗಿದೆ. ಪರಿಷ್ಕೃತ ವ್ಯಕ್ತಿತ್ವ ಪರೀಕ್ಷೆಯ ದಿನಾಂಕ ಮತ್ತು ಸಮಯಗಳ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಕೆಪಿಎಸ್‌ಇ ಆಯೋಗದ ಕಾರ್ಯದರ್ಶಿ ಜ್ಯೋತಿ ಕೆ. ತಿಳಿಸಿದ್ದಾರೆ.