ಚಿತ್ರದುರ್ಗ: ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮನಿ ಡಬ್ಲಿಂಗ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಚಂದ್ರಶೇಖರ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಮಾರ್ಚ್ 4ರಂದು ಪೊಲೀಸರು ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಚಂದ್ರಶೇಖರ್ ಪರಾರಿಯಾಗಿದ್ದರು.
ಈ ಪ್ರಕರಣದಲ್ಲಿ ಮಂಗಳೂರು ಮೂಲದ ರೋಷನ್ ಸಲ್ದಾನ್ ಎಂಬ ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಚಂದ್ರಶೇಖರ್ ಸೇರಿ ಇಬ್ಬರು ಆರೋಪಿಗಳು ಪರಾರಿಯಾಗಿದ್ದರು.
ನಿನ್ನೆ ಚಂದ್ರಶೇಖರ್ ಅವರನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ಅರುಣ್ ನಾಗೇಗೌಡ, ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.






















