Home Advertisement
Home ನಮ್ಮ ಜಿಲ್ಲೆ ಚಿಕ್ಕಬಳ್ಳಾಪುರ ಮಕ್ಕಳಾಗದ ಕಾರಣಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ

ಮಕ್ಕಳಾಗದ ಕಾರಣಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ

0
23

ಚಿಕ್ಕಬಳ್ಳಾಪುರ: ತಾಲೂಕಿನ ನಂದಿಕ್ರಾಸ್ ಬಳಿ ರಸ್ತೆಯ ಪಕ್ಕದ ರೈತನ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್‌ನೋಟ್ ದೊರೆತಿರುವುದರಿಂದ ಇದೊಂದು ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಧಾರವಾಡ ಮೂಲದ ಸಂಗಪ್ಪ (40) ಮೃತ ವ್ಯಕ್ತಿಯೆಂದು ತಿಳಿದು ಬಂದಿದ್ದು, ತಾಲೂಕಿನ ನಂದಿಕ್ರಾಸ್ ಬಳಿ ಸರ್ವಿಸ್ ರಸ್ತೆಯ ರೈತ ಆಂಜಿನಪ್ಪ ಎಂಬುವರ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸಂಗಪ್ಪನ ಶವ ಪತ್ತೆಯಾಗಿದೆ..

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಮೃತ ಸಂಗಪ್ಪ ಅವರು ಮದುವೆಯಾಗಿದ್ದರೂ ಸಂತಾನವಾಗಿರಲಿಲ್ಲ. ಈ ವಿಚಾರವಾಗಿ ಮನೆಯಲ್ಲಿ ಪದೇ ಪದೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಅದರಲ್ಲಿ ಆತ್ಮಹತ್ಯೆಗೆ ತಾನೇ ಕಾರಣ ಎಂದು ಸಂಗಪ್ಪ ಬರೆದಿರುವುದಾಗಿ ತಿಳಿದು ಬಂದಿದೆ. ಆದರೆ ಧಾರವಾಡ ಮೂಲದ ವ್ಯಕ್ತಿ ಇಲ್ಲಿ ಯಾಕೆ ಬಂದು ಆತ್ಮಹತ್ಯೆ ಮಾಡಿಕೊಂಡರು ಎಂದು ಅನುಮಾನ ವ್ಯಕ್ತವಾಗಿದೆ.

ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎಸ್‌ಪಿ ಕುಶಾಲ್ ಚೌಕ್ಸೆ, ಎಎಸ್‌ಪಿ ಜನನಾಥ್ ರೈ, ಡಿವೈಎಸ್‌ಪಿ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.