SK Home Ad
Home ಸುದ್ದಿ ದೇಶ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

0
428

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಜ್ವರ, ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆರೋಗ್ಯದ ಮೇಲೆ ವೈದ್ಯರು ನಿಗಾ ಇರಿಸಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಆಸ್ಪತ್ರೆಯ ಬುಲೆಟಿನ್ ಪ್ರಕಾರ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ ಕೆಲವು ಸಮಯದಿಂದ ಸೋನಿಯಾ ಗಾಂಧಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.