Home Advertisement
Home ನಮ್ಮ ಜಿಲ್ಲೆ ಕಲಬುರಗಿ ನಡುರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದ ಪಾಪಿ

ನಡುರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದ ಪಾಪಿ

0
163

ಕಲಬುರಗಿ: ಪತ್ನಿಯೊಂದಿಗೆ ಎರ್ಟಿಗಾ ಕಾರ್‌ನಲ್ಲಿ ಬಂದಿದ್ದ ಪತಿ ತನ್ನ ಪತ್ನಿಯನ್ನು ನಡುರಸ್ತೆಯಲ್ಲಿ ಕೆಳಗಿಳಿಸಿ ಕತ್ತು ಕೊಯ್ದು ಭೀಕರವಾಗಿ ಕೊಲೆಗೈದಿರುವ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ಅಫಜಲಪುರ ತಾಲೂಕಿನ ಬಳ್ಳೂರ್ಗಿ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

ಶೈಲಾ (28) ಎಂಬಾಕೆ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಅಕ್ಷಯ್ ಖುದ್ಧು ಕೊಲೆಗೈದು ಪರಾರಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತ ಮಹಿಳೆ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಳಂದ ಡಿವೈಎಸ್ಪಿ ತಮ್ಮರಾಯ ಪಾಟೀಲ್, ಅಫಜಲಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.