Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಸವಾಲು, ಪ್ರಚಾರ, ಟಾಂಗ್: ದಾವಣಗೆರೆಯಲ್ಲಿ ಪ್ರದೀಪ್ ಈಶ್ವರ್ ಅಬ್ಬರ

ಸವಾಲು, ಪ್ರಚಾರ, ಟಾಂಗ್: ದಾವಣಗೆರೆಯಲ್ಲಿ ಪ್ರದೀಪ್ ಈಶ್ವರ್ ಅಬ್ಬರ

0
126

ದಾವಣಗೆರೆ: ಬಿಜೆಪಿಗರ ಸವಾಲನ್ನು ಸ್ವೀಕರಿಸಿ ಬಿಜೆಪಿ ಕಚೇರಿ ಮುಂದೆ ಬಂದರೂ ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆರ್. ಅಶೋಕ್, ವಿಜಯೇಂದ್ರ ಸೇರಿದಂತೆ ಜಿಲ್ಲಾ ನಾಯಕರ ಸವಾಲನ್ನು ಸ್ವೀಕರಿಸಿ ದಾವಣಗೆರೆಗೆ ಬಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದೇನೆ. ಯಾರಿಂದಲೂ ಏನೂ ಮಾಡಿಕೊಳ್ಳಲು ಆಗಲಿಲ್ಲ ಎಂದು ಟಾಂಗ್ ಕೊಟ್ಟರು.

ಕಳೆದ ಹತ್ತು ವರ್ಷಗಳಿಂದ ಬಿಜೆಪಿಯ ಕೇಂದ್ರ ಸಚಿವರು ಹಾಗೂ ಸಂಸದರು ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡುತ್ತಾ ಬಂದಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ತೀವ್ರವಾಗಿ ಕಿಡಿಕಾರಿದರು.

ಅಲ್ಪಸಂಖ್ಯಾತರ ದೇಶಭಕ್ತಿ, ಆಜಾನ್ ಪ್ರಾರ್ಥನೆ ಹಾಗೂ ಹಿಜಾಬ್ ವಿಷಯಗಳನ್ನು ಮುಂದಿಟ್ಟುಕೊಂಡು ಸಮಾಜದಲ್ಲಿ ಸಂಘರ್ಷ ಉಂಟುಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಿದಾಗ ಅದನ್ನು ಮುಸ್ಲಿಂ ಬಜೆಟ್ ಎಂದು ಟೀಕಿಸುವ ಬಿಜೆಪಿ ನಾಯಕರು, ಸಮುದಾಯದ ಸಬಲೀಕರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಅವರಂತಹ ಹೊಸ ತಲೆಮಾರಿನ ನಾಯಕನನ್ನು ಗೆಲ್ಲಿಸುವ ಮೂಲಕ ಬದಲಾವಣೆ ತರಬೇಕಿದೆ ಎಂದರು.

ಬಿಜೆಪಿಯವರು ಅಹಿಂದ ವರ್ಗದವರನ್ನು ಎಂದಿಗೂ ಗೌರವಿಸಿಲ್ಲ. ಒಬ್ಬ ಅಹಿಂದ ವರ್ಗದ ಹುಡುಗನಿಗೆ ಚಪ್ಪಲಿ ತೋರಿಸುವ ಮೂಲಕ ಇಡೀ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಯತ್ನಾಳ್ ಅವರಂತಹ ನಾಯಕರು ಒಂದು ಸಮುದಾಯದ ಮತಗಳೇ ಬೇಡ ಎನ್ನುವ ಮೂಲಕ ಹೆಣ್ಣು ಮಕ್ಕಳ ಬಗ್ಗೆ ಅಸಭ್ಯವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಂತಹ ನಾಯಕರನ್ನು ಮುಖ್ಯಮಂತ್ರಿ ಮಾಡಿದ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ನಂಬಿಕೆ ಇದೆ. ಮುಂಬರುವ ಚುನಾವಣೆಯಲ್ಲಿ ಹಿಂದುಳಿದ ವರ್ಗದವರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.