ಗುವಾಹಟಿ: ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ವೈಭವ್ ಸೂರ್ಯವಂಶಿ ತಮ್ಮ ಹೆಸರಿನಲ್ಲಿ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ವೈಭವ್ ಈ ಸಾಧನೆ ಮಾಡಿದ್ದಾರೆ.
ವೈಭವ್ ಸೂರ್ಯವಂಶಿ ಕೇವಲ 17 ಎಸೆತಗಳಲ್ಲಿ 4 ಬೌಂಡರಿ, 6 ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದರು. ಅನ್ಶುಲ್ ಕಾಂಬೋಜ್ ಎಸೆತದಲ್ಲಿ ಸರ್ಫರಾಜ್ ಖಾನ್‌ಗೆ ಕ್ಯಾಚ್ ನೀಡಿ ಔಟಾದರು.























