SK Home Ad
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಭೀಕರ ಅಪಘಾತ: ಟಿಪ್ಪರ್‌ಗೆ ಬೈಕ್ ಡಿಕ್ಕಿ – ತಾಯಿ-ಮಗ ಸಾವು

ಭೀಕರ ಅಪಘಾತ: ಟಿಪ್ಪರ್‌ಗೆ ಬೈಕ್ ಡಿಕ್ಕಿ – ತಾಯಿ-ಮಗ ಸಾವು

0
643
File Photo

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ ಪುರಸಭಾ ವ್ಯಾಪ್ತಿಯ ಕೆಇಬಿ ಸಮೀಪದಲ್ಲಿ ಮಂಗಳವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಯಾನೆ ಶ್ರೀನಿವಾಸ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಿಬ್ಬರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ವೇಗವಾಗಿ ಢಿಕ್ಕಿ ಹೊಡೆದಿದ್ದಾರೆ.

ಅಪಘಾತದ ತೀವ್ರತೆಗೆ ತಾಯಿ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರ ಸೀನ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.