ಕ್ರಿಕೆಟ್ ಅಂದ್ರೆ ಎಲ್ಲರಿಗೂ ಅಚ್ಚುಮೆಚ್ಚು, ವಿಶೇಷವಾಗಿ ನವ ಯುವಕರಿಗೆ ಮತ್ತು ಯುವತಿಯರಿಗೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ RCB vs CSK ಪಂದ್ಯವನ್ನು ವೀಕ್ಷಿಸಲು ಕೋಟ್ಯಂತರ ಕ್ರಿಕೆಟ್ ಅಭಿಮಾನಗಳು ಕಾಯುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಎರಡು ತಂಡಗಳು ಮುಖಾಮುಖಿಯಾದ್ರೆ ಸಾಕು ಅಭಿಮಾನಿಗಳಿಗೆ ಹಬ್ಬ ಅಂತಲೇ ಹೇಳಬಹುದು. ಸಮಾಜಿಕ ಜಾಲತಾಣದಲ್ಲಂತೂ ಮಿನಿ ಯುದ್ಧ ಶುರುವಾಗಿರುತ್ತೆ ಅಂದ್ರೆ ತಪ್ಪಾಗಲಾರದು.
ಇನ್ನು ಐಪಿಎಲ್ 2026ರ ಆವೃತ್ತಿಯಲ್ಲಿ RCB ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದೆ. ಎರಡನೇ ಪಂದ್ಯವನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಆದ್ರೆ CSK ತಂಡ ಮಾತ್ರ ಎರಡು ಪಂದ್ಯಗಳಲ್ಲಿ ಸೋತಿದ್ದಾರೆ. RCB ವಿರುದ್ಧ ಗೆಲ್ಲುವುದಕ್ಕೆ ಸಕತ್ ಪ್ಲಾನ್ ಮಾಡಿಕೊಂಡಿದ್ದಾರೆ. CSK ತಂಡ ತನ್ನ ಮೊದಲ ಎರಡು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದೆ. ಇದರಿಂದ ತಂಡದಲ್ಲಿನ ಆತ್ಮವಿಶ್ವಾಸ ಕಡಿಮೆಯಾಗಿದೆ ಎನ್ನುವಂತೆ ಕಾಣುತ್ತಿದ್ದರು, ಮೂರನೇ ಪಂದ್ಯದಲ್ಲಿ ಗೆದ್ದೇ ಗೆಲ್ಲುತ್ತೇವೆ ನಿರೀಕ್ಷೆಯೊಂದಿಗೆ ಕಣಕ್ಕಳಿದಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ 8 ವಿಕೆಟ್‌ಗಳಿಂದ ಮತ್ತು ಎರಡನೇ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳಿಂದ ಸೋತಿತ್ತು. ತಂಡದಲ್ಲಿ ಬಹು ನಿರೀಕ್ಷಿತ ಆಟಗಾರರಾದ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಕಳಪೆ ಪ್ರದರ್ಶನ ನೀಡಿದ್ದರು. ಶಿವಂ ದುಬೆ, ಆಯುಷ್ ಮಾತ್ರೆ ಮತ್ತು ಸರ್ಫರಾಜ್ ಖಾನ್ ಸ್ವಲ್ಪ ಮಟ್ಟಿಗೆ ಉತ್ತಮ ಪ್ರದರ್ಶನ ಆಟಗಳನ್ನು ಆಡಿದ್ದಾರೆ.
ಚೆನ್ನೈ ತಂಡಕ್ಕೆ ಈ ಪಂದ್ಯ ಗೆಲ್ಲಲ್ಲೇ ಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನೆಲೆ ತಂಡದಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಿದೆ. ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಡೆವಾಲ್ಡ್ ಬ್ರೆವಿಸ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಐಪಿಎಲ್ ಇತಿಹಾಸದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ 35 ಪಂದ್ಯಗಳು ನಡೆದಿವೆ. ಈ ಪೈಕಿ, ಚೆನ್ನೈ ಸೂಪರ್ ಕಿಂಗ್ಸ್ ಗರಿಷ್ಠ 21 ಪಂದ್ಯಗಳನ್ನು ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.
ಒಟ್ಟಿನಲ್ಲಿ ಇಂದು ನಡೆಯಲಿರುವ RCB vs CSK ಪಂದ್ಯದ ಮೇಲೆ ಅಭಿಮಾನಿಗಳ ಚಿತ್ತ. ಇಂದಿನ ಪಂದ್ಯದಲ್ಲಿ ಗೆಲುವು ಯಾರ ಪಾಲಾಗುತ್ತೆ ಎನ್ನುವುದು ಕಾದು ನೋಡಬೇಕಿದೆ.























