Home Advertisement
Home ಕ್ರೀಡೆ IPL 2026: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ರಾಜಸ್ಥಾನ

IPL 2026: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ರಾಜಸ್ಥಾನ

0
36

ಗುವಾಹಟಿ: ಐಪಿಎಲ್ 19ನೇ ಆವೃತ್ತಿಯ 16ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್‌ ಮುಖಾಮುಖಿಯಾಗಿದ್ದು, ರಾಜಸ್ಥಾನ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ.

ಗುವಾಹಟಿಯ ಬರ್ಸಾಪರ ಕ್ರೀಡಾಂಗಣ ನಡೆಯುತ್ತಿರುವ ಈ ಪಂದ್ಯದ ಟಾಸ್‌ಗೂ ಮುನ್ನವೇ ಮಳೆ ಆರ್ಭಟ ಜೋರಾಗಿದ್ದು, ಟಾಸ್‌ಗೆ ವಿಳಂಬಕ್ಕೆ ಕಾರಣವಾಯಿತು.

ಸತತ ಎರಡು ಪಂದ್ಯ ಗೆದ್ದಿರುವ ಆರ್‌ಸಿಬಿ ಇಂದು ಹ್ಯಾಟ್ರಿಕ್ ಗೆಲುವಿನ ಗುರಿ ಹೊಂದಿದೆ. ಈ ಪಂದ್ಯದಲ್ಲಿ ಮುಖ್ಯವಾಗಿ ರಾಜಸ್ಥಾನ್ ತಂಡದ 15 ವರ್ಷದ ವೈಭವ್ ಸೂರ್ಯವಂಶಿ ಆಟದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಸದ್ಯ ಆರ್‌ಸಿಬಿ ಆಡಿದ ಎರಡು ಪಂದ್ಯಗಳಲ್ಲಿ ಎರಡರಲ್ಲೂ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದರೆ, ರಾಜಸ್ಥಾನ ತಂಡ ಆಡಿದ ಮೂರು ಪಂದ್ಯಗಳಲ್ಲೂ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ.