Home Advertisement
Home ನಮ್ಮ ಜಿಲ್ಲೆ ಧಾರವಾಡ ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

0
11

ಧಾರವಾಡ: ಇಲ್ಲಿನ ಮೆಹಬೂಬನಗರ ನಿವಾಸಿ, ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಖಾನ್ ಪಠಾಣ ಎಂಬುವವರನ್ನು ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾತ್ರಿ 10 ಗಂಟೆ ಹೊತ್ತಿಗೆ ನಡೆದಿದೆ.

ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ದೌಡಾಯಿಸಿದ್ದು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಹತ್ಯೆಯಾದ ಫೈರೋಜ್ ಖಾನ್ ಅವರ ದೇಹವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರು, ಆಪ್ತರು, ಪಕ್ಷದ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹತ್ಯೆಗೆ ಕಾರಣವೇನು? ಹತ್ಯೆ ಮಾಡಿದವರು ಯಾರು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.