Home Advertisement
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಜೋಕಾಲಿ ಆಡುತ್ತಿದ್ದ ಬಾಲಕಿಯ ಕೊರಳಿಗೆ ಸೀರೆ ಸಿಲುಕಿ ಸಾವು

ಜೋಕಾಲಿ ಆಡುತ್ತಿದ್ದ ಬಾಲಕಿಯ ಕೊರಳಿಗೆ ಸೀರೆ ಸಿಲುಕಿ ಸಾವು

0
110

ಚಿಕ್ಕಮಗಳೂರು: ಮನೆ ಒಳಗೆ ಜೋಕಾಲಿ ಆಡುತ್ತಿದ್ದ ವೇಳೆ ಸೀರೆ ಉರುಳಿ ಕುತ್ತಿಗೆಗೆ ಸಿಲುಕಿದ ಪರಿಣಾಮ 10 ವರ್ಷದ ಬಾಲಕಿ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಲೇಖನಾ ಎಂದು ಗುರುತಿಸಲಾಗಿದ್ದು, ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ದುರಂತ ಸಂಭವಿಸಿರುವುದು ಇನ್ನಷ್ಟು ದುಃಖಕರವಾಗಿದೆ. ಸೀರೆ ಬಳಸಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದಾಗ ಅದು ಅಕಸ್ಮಿಕವಾಗಿ ಉರುಳಿ ಕುತ್ತಿಗೆಗೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಬಾಲಕಿ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.