Home Advertisement
Home ಸುದ್ದಿ ದೇಶ ಉಧಂಪುರದಲ್ಲಿ ಕಂದಕಕ್ಕೆ ಬಸ್ ಉರುಳಿ : 15 ಮಂದಿ ಸಾವು

ಉಧಂಪುರದಲ್ಲಿ ಕಂದಕಕ್ಕೆ ಬಸ್ ಉರುಳಿ : 15 ಮಂದಿ ಸಾವು

0
154

ಶ್ರೀನಗರ: ಉಧಂಪುರ ಜಿಲ್ಲೆಯಲ್ಲಿ ಘಟಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಮೂಲಗಳ ಪ್ರಕಾರ, ರಾಮನಗರದಿಂದ ರಿಂದ ಉಧಂಪುರ ಕಡೆಗೆ ತೆರಳುತ್ತಿದ್ದ ಸಾರ್ವಜನಿಕ ಸಾರಿಗೆ ಬಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಪರಿಣಾಮವಾಗಿ ಸ್ಥಳದಲ್ಲೇ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಚುರುಕು : ಘಟನೆಯ ಮಾಹಿತಿ ತಿಳಿದ ತಕ್ಷಣ ಸೇನೆ, ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೈದ್ಯಕೀಯ ನೆರವು ಮತ್ತು ಏರ್‌ಲಿಫ್ಟ್ ವ್ಯವಸ್ಥೆ : ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಗಂಭೀರ ಗಾಯಾಳುಗಳನ್ನು ತುರ್ತು ಚಿಕಿತ್ಸೆಗೆ ವಿಮಾನ ಮೂಲಕ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

“ರಕ್ಷಣಾ ಕಾರ್ಯಾಚರಣೆ ತಕ್ಷಣ ಪ್ರಾರಂಭವಾಗಿದೆ. ಎಲ್ಲಾ ರೀತಿಯ ನೆರವು ಒದಗಿಸಲಾಗುತ್ತಿದೆ. ಗಂಭೀರ ಗಾಯಾಳುಗಳಿಗೆ ಏರ್‌ಲಿಫ್ಟ್ ಸೌಲಭ್ಯ ಕಲ್ಪಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ : ಪ್ರಾಥಮಿಕ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ 15 ಎಂದು ದೃಢಪಟ್ಟಿದ್ದರೂ, ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಸೂಚಿಸುತ್ತಿವೆ.

ಪರಿಹಾರ ಘೋಷಣೆ : ಜಮ್ಮು ಮತ್ತು ಕಾಶ್ಮೀರದ ಉಧಂಪುರದ ದುರ್ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು. ಸಾಮಾಜಿಕ ಜಾಲತಾಣದ ಮೂಲಕ PMOದಿಂದ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಹೃತ್ಪೂರ್ವಕ ಸಂತಾಪ ಸೂಚಿಸಿದ್ದು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರಂತ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ