ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದುಕೊಂಡಿದ್ದು, ಫೀಲ್ಡಿಂಗ್ ಆಯ್ದುಕೊಂಡಿದೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಸನ್‌ರೈಸರ್ಸ್ ಮೊದಲ ಬ್ಯಾಟ್ ಮಾಡುವ ಅವಕಾಶ ಪಡೆದುಕೊಂಡಿದೆ.
ಹೈದರಾಬಾದ್ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಸಮತೋಲಿತ ನೆರವು ನೀಡಲಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ಬ್ಯಾಟಿಂಗ್‌ಗೆ ಹೆಚ್ಚು ಸಹಕಾರಿಯಾಗಲಿದ್ದು, ಓವರ್‌ಗಳು ಕಳೆದಂತೆ ಪಿಚ್ ನಿಧಾನಗತಿಯ ಬೌಲಿಂಗ್ ಟ್ರ‍್ಯಾಕ್ ಆಗಿ ಬದಲಾಗಲಿದೆ.
ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳು ಇದುವರೆಗೆ 26 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಹೈದರಾಬಾದ್ 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಡೆಲ್ಲಿ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಉಭಯ ತಂಡಗಳಲ್ಲಿ ಯುವ ಹಾಗೂ ಅನುಭವಿ ಆಟಗಾರರ ದಂಡೇ ಇರುವುದರಿಂದ ಅಭಿಮಾನಿಗಳಿಗೆ ತುರುಸಿನ ಪೈಪೋಟಿ ನಿರೀಕ್ಷಿಸಬಹುದಾಗಿದೆ.























