ಬೆಳಗಾವಿ: ಬಿಸಿಲಿನ ತಾಪಕ್ಕೆ ರಾಜ್ಯದಲ್ಲಿ ಎರಡನೇ ಬಲಿಯಾಗಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟೇಶ್ ಬಳ್ಳಾರಿ(35) ಮೃತಪಟ್ಟಿದ್ದಾರೆ.
ವೆಂಕಟೇಶ್ ಬಳ್ಳಾರಿ ಅವರು ಮೂಲತಃ ರಾಯಬಾಗ ಪಟ್ಟಣದ ನಿವಾಸಿಯಾಗಿದ್ದರು. ಬಸವೇಶ್ವರ ಜಯಂತಿ ಅಂಗವಾಗಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ವೇಳೆ ಏಕಾಏಕಿ ಸುಸ್ತಾಗಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.























