ಬೆಂಗಳೂರು: ಎಸ್ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಾಳೆ ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಬಳಿಕ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.
ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ನ್ಯಾಯಾಲಯದ ಆದೇಶದಂತೆ ತೃತೀಯ ಭಾಷೆ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತರಲು ತೀರ್ಮಾನ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.





















