ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ನನಗೆ ಯಾವುದೇ ಅರ್ಜಿ ಬಂದಿಲ್ಲ: ಆರ್‌ ಅಶೋಕ

0
120
ಆರ್‌ ಅಶೋಕ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಅನುಮತಿ ಕೋರಿ ನನಗೆ ಇದುವರೆಗೂ ಯಾವುದೇ ಅರ್ಜಿಗಳು ಬಂದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದುವರೆಗೆ ನನಗೆ ಯಾವುದೇ ಮನವಿಗಳು ಬಂದಿಲ್ಲ. ಜಿಲ್ಲಾಧಿಕಾರಿಗಳಿಗೆ ಕೊಟ್ಟಿದ್ದರೆ ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಮುಂದೆ ಗಣೇಶೋತ್ಸವ ಆಚರಣೆಗೆ ಸೂಕ್ತ ತೀರ್ಮಾನ ಮಾಡಲಾಗುವುದು. ಸದ್ಯ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಆದೇಶ ಹೊರಡಿಸಲಿದ್ದೇವೆ ಎಂದು ತಿಳಿಸಿದರು.

ಆರ್‌ ಅಶೋಕ
Previous articleಮಾಜಿ ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ
Next articleಜಿನ್ನಾ, ಸಾವರ್ಕರ್ ಇಬ್ಬರೂ ಒಂದೇ: ಬಿ.ಕೆ. ಹರಿಪ್ರಸಾದ್