Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಪಂಚಮಸಾಲಿ ಟ್ರಸ್ಟ್‌ನಿಂದ ಉಮಾಪತಿ, ಪೂಜಾರ್, ಪ್ರಕಾಶ್ ಉಚ್ಚಾಟನೆ

ಪಂಚಮಸಾಲಿ ಟ್ರಸ್ಟ್‌ನಿಂದ ಉಮಾಪತಿ, ಪೂಜಾರ್, ಪ್ರಕಾಶ್ ಉಚ್ಚಾಟನೆ

0
139

ದಾವಣಗೆರೆ: ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಈ ಮೂವರು ಪ್ರಮುಖ ವ್ಯಕ್ತಿಗಳನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಎಂ. ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೂವರ ಉಚ್ಚಾಟನೆಗೆ ಪ್ರಮುಖ ಕಾರಣ, ಅವರ ಮೇಲೆ ಅವ್ಯವಹಾರ, ಅಧರ್ಮ ಮತ್ತು ಅಪನಂಬಿಕೆಯ ಆರೋಪಗಳಿರುವುದರಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ರಾಜ್ಯ ಸಂಘವೇ ಸುಪ್ರೀಂ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದಲ್ಲಿ 13,600 ಸದಸ್ಯರಿದ್ದಾರೆ. ಆದರೆ ಟ್ರಸ್ಟ್‌ನಲ್ಲಿ ಅಂತಹ ಯಾವುದೇ ಸದಸ್ಯತ್ವ ವ್ಯವಸ್ಥೆ ಇಲ್ಲ. ಹೀಗಾಗಿ ಸಂಘವೇ ಸುಪ್ರೀಂ ಆಗಿದೆ. ಧರ್ಮದರ್ಶಿಗಳು ಮಠದ ವ್ಯವಹಾರದಲ್ಲಿ ಅಕ್ರಮ ನಡೆಸಿದರೆ, ಅಧರ್ಮವಾಗಿ ನಡೆದುಕೊಂಡರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಧಿಕಾರ ಸಂಘದ ಬೈಲಾದಲ್ಲಿ ಇದೆ. ಈ ನಿಟ್ಟಿನಲ್ಲಿ ಈ ಮೂವರು ಧರ್ಮದರ್ಶಿಗಳನ್ನು ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದರು.

ಇಂದಿನಿಂದಲೇ ಅಧಿಕಾರ ಕಡಿತ: ಉಚ್ಚಾಟನೆಗೊಂಡಿರುವ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿಗಳಾದ ಚಂದ್ರಶೇಖರ್ ಪೂಜಾರ್, ಜ್ಯೋತಿ ಪ್ರಕಾಶ್ ಇಂದಿನಿಂದಲೇ ಅವರಿಗೆ ಯಾವುದೇ ಲೆಕ್ಕಪತ್ರ ನಿರ್ವಹಣೆ, ಬ್ಯಾಂಕ್ ವ್ಯವಹಾರ ಅಥವಾ ಸಂಘಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.